‘ಫೆ.11ರಂದು ಮಹಿಳೆ ಸುಟ್ಟ ಗಾಯಗಳಿಂದ ಎಸ್ಜಿಎಂ ಆಸ್ಪತ್ರೆ ಸೇರಿರುವ ಮಾಹಿತಿ ಲಭ್ಯವಾಗಿತ್ತು. ಆದರೆ ಸಂತ್ರಸ್ತೆ ಹೇಳಿಕೆ ನೀಡುವಷ್ಟು ಶಕ್ತರಾಗಿರಲಿಲ್ಲ. ಬಳಿಕ ಆಕೆಯನ್ನು ಬಲ್ಬೀರ್ ವಿಹಾರ್ ನಿವಾಸಿ ಎಂದು ಗುರುತಿಸಲಾಯಿತು. ಮಹಿಳೆಯು ಪತಿಯನ್ನು ತೊರೆದು ಕಳೆದ ಆರು ವರ್ಷಗಳಿಂದ ಅರೋಪಿ ಮೋಹಿತ್ ಜೊತೆ ವಾಸಿಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಆಕೆಗೆ ಇಬ್ಬರು ಮಕ್ಕಳಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.