ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ | ಎಎಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಅಣ್ಣಾಮಲೈ

Published 6 ಮೇ 2024, 4:33 IST
Last Updated 6 ಮೇ 2024, 4:33 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಎಎಪಿ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಮತ್ತು ಯಮುನಾ ನದಿಯನ್ನು ಇನ್ನಷ್ಟು ಮಲಿನಗೊಳಿಸುತ್ತಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಆರೋಪಿಸಿದ್ದಾರೆ.

ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ದೆಹಲಿ ಬಿಜೆಪಿ ಘಟಕದ ತಮಿಳುನಾಡು ಪ್ರಕೋಸ್ಟ್‌ (ವಿಂಗ್‌) ಆಯೋಜಿಸಿದ್ದ ತಮಿಳು ಸಂಗಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲೆಡೆ ತಮಿಳು ಸಮುದಾಯಕ್ಕೆ ಗೌರವ ನೀಡಿದ್ದಾರೆ. ಮೋದಿ ಸರ್ಕಾರದ ಯೋಜನೆಗಳ ಲಾಭವನ್ನು ಸಮಾಜದ ಎಲ್ಲಾ ವರ್ಗದವರೂ ತಾರತಮ್ಯವಿಲ್ಲದೆ ಸ್ವೀಕರಿಸಿದ್ದಾರೆ’ ಎಂದು ಹೇಳಿದರು.

ಎಎಪಿ ಸರ್ಕಾರ ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸುವುದರ ಜತೆಗೆ ಯಮುನಾ ನದಿಯನ್ನು ಇನ್ನಷ್ಟು ಕಲುಷಿತಗೊಳಿಸಿದೆ. ಹೀಗಾಗಿ ಬಿಜೆಪಿ ದೆಹಲಿಯ ಎಲ್ಲ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು. ಗೆಲುವು ಸಾಧಿಸಿದ ನಂತರ ತಮಿಳುನಾಡು ಹಾಗೂ ದೇಶದ ದೊಡ್ಡ ನಾಯಕರನ್ನು ಆಹ್ವಾನಿಸಿ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುತ್ತೇವೆ ಎಂದು ತಿಳಿಸಿದರು.

ರಾಷ್ಟ್ರ ರಾಜಧಾನಿ ದೆಹಲಿ ಏಳು ಲೋಕಸಭಾ ಕ್ಷೇತ್ರಗಳಿಗೆ 25ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT