ನವದೆಹಲಿ: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ದೆಹಲಿಯಲ್ಲಿ ಮೊದಲ ಪ್ಲಾಸ್ಮಾ ಬ್ಯಾಂಕ್ ಗುರುವಾರದಿಂದ ಕಾರ್ಯಾರಂಭಿಸಿದೆ.

ಕೋವಿಡ್–19ರಿಂದ ಚೇತರಿಸಿಕೊಂಡ 14 ದಿನಗಳ ಬಳಿಕ ರೋಗಿಗಳು ತಮ್ಮ ಪ್ಲಾಸ್ಮಾ ದಾನ ಮಾಡಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

ಆನ್‌ಲೈನ್ ಸಂವಾದದಲ್ಲಿ ಮಾತನಾಡಿದ ಅವರು, ಪ್ಲಾಸ್ಮಾ ದಾನ ಮಾಡಬಯಸುವವರು ಸಹಾಯವಾಣಿ ಸಂಖ್ಯೆ (1031 ಮತ್ತು 8800007722) ಸಂಪರ್ಕಿಸುವಂತೆ ತಿಳಿಸಿದರು.

ಸರ್ಕಾರಿ ಸ್ವಾಮ್ಯದ ಇನ್‌ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸ್ ಆವರಣದಲ್ಲಿ ಪ್ಲಾಸ್ಮಾ ಬ್ಯಾಂಕ್ ಅನ್ನು ಸರ್ಕಾರ ಸ್ಥಾಪಿಸಿದೆ. ಪ್ಲಾಸ್ಮಾ ಚಿಕಿತ್ಸೆಯಿಂದ ಕೋವಿಡ್ ರೋಗಿಗಳ ಸಾವುಗಳು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಕೇಜ್ರಿವಾಲ್ ಆಶಿಸಿದರು.

18ರಿಂದ 60 ವರ್ಷದೊಳಗಿನವರು ಮತ್ತು 50 ಕೆ.ಜಿ ಗಿಂತ ಹೆಚ್ಚು ತೂಕ ಹೊಂದಿರುವವರು ತಮ್ಮ ಪ್ಲಾಸ್ಮಾವನ್ನು ಕೋವಿಡ್ ರೋಗಿಗಳಿಗೆ ದಾನ ಮಾಡಬಹುದು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.