‘ತಮಿಳುನಾಡಿಗೆ ₹5 ಲಕ್ಷ ಕೋಟಿ’
‘ಅನುದಾನ ಹಂಚಿಕೆಯಲ್ಲಿ ತಮಿಳುನಾಡಿಗೆ ಕೇಂದ್ರದಿಂದ ಅನ್ಯಾಯವಾಗಿಲ್ಲ. ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014 ರಿಂದ 24ರ ಅವಧಿಯಲ್ಲಿ ರಾಜ್ಯಕ್ಕೆ ₹5,08,337 ಕೋಟಿ ಅನುದಾನ ಒದಗಿಸಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಆಡಳಿತಾ ರೂಢ ಡಿಎಂಕೆ ವಿಫಲವಾಗಿದೆ. ಜನರ ಗಮನ ಬೇರೆಡೆ ಸೆಳೆಯಲು ಮುಖ್ಯಮಂತ್ರಿ ಸ್ಟಾಲಿನ್ ಕ್ಷೇತ್ರಗಳ ಪುನರ್ ವಿಂಗಡಣೆ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಟೀಕಿಸಿದರು.