ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Delhi Pollution: ವಾಯು ಶುದ್ಧೀಕರಣ ಉಪಕರಣ, ಮಾಸ್ಕ್‌ಗಳಿಗೆ ಬೇಡಿಕೆ ಹೆಚ್ಚಳ

Published 3 ನವೆಂಬರ್ 2023, 14:21 IST
Last Updated 3 ನವೆಂಬರ್ 2023, 14:21 IST
ಅಕ್ಷರ ಗಾತ್ರ

ನವದೆಹಲಿ: ವಾಯು ಮಾಲಿನ್ಯ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ ದೆಹಲಿ ಹಾಗೂ ಎನ್‌ಸಿಆರ್‌ನಲ್ಲಿ ವಾಯು ಶುದ್ಧೀಕರಣ ಉಪಕರಣ ಹಾಗೂ ಮಾಸ್ಕ್‌ಗಳಿಗೆ ಬೇಡಿಕೆ ಹೆಚ್ಚಳವಾಗಿದೆ ಎಂದು ವ್ಯಾಪಾರಿಗಳು ಹಾಗೂ ಫಾರ್ಮಾಸಿಸ್ಟ್‌ಗಳು ಹೇಳಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ವಾಯು ಗುಣಮಟ್ಟ ಪ್ರಮಾಣ 450 ದಾಟಿದ್ದು, ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಅನಿವಾರ್ಯತೆಯನ್ನು ಸೃಷ್ಠಿಸಿದೆ.

‘ಕಳೆದೆರಡು ದಿನಗಳಿಂದ ವಾಯು ಶುದ್ಧೀಕರಣ ಉಪಕರಣಗಳಿಗೆ ಶೇ 20–25ರಷ್ಟು ಬೇಡಿಕೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ವಾಯುಗುಣಮಟ್ಟ ಕ್ಷೀಣಿಸುತ್ತಿರುವುದರಿಂದ ಜನ ಹೆಚ್ಚಾಗಿ ವಾಯು ಶುದ್ಧೀಕರಣ ಉಪಕರಣಗಳನ್ನು ಕೇಳುತ್ತಿದ್ದಾರೆ’ ಎಂದು ದೆಹಲಿಯ ರಜೌರಿ ಗಾರ್ಡನ್‌ನ ವ್ಯಾಪಾರಿಯೊಬ್ಬರು ಹೇಳಿದರು.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ವರ್ಷ ಈಗಷ್ಟೇ ವಾಯು ಶುದ್ಧೀಕರಣ ಉಪಕರಣಗಳ ಬೇಡಿಕೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಈ ಬೇಡಿಕೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಗಾಜಿಯಾಬಾದ್‌ನ ವ್ಯಾಪಾರಿಯೊಬ್ಬರು ತಿಳಿಸಿದರು.

ದೀಪಾವಳಿಗೆ ಮುನ್ನ ಹರಿಯಾಣ ಹಾಗೂ ಪಂಜಾಬ್‌ನ ಉತ್ತರ ಭಾಗದಲ್ಲಿ ಬೆಳೆ ಸುಡುತ್ತಿರುವುದರಿಂದ ವಾಯುಮಾಲಿನ್ಯ ಹೆಚ್ಚಳವಾಗುತ್ತಿದೆ. ಮಾಸ್ಕ್‌ಗಳಿಗೆ ಕೂಡ ಬೇಡಿಕೆ ಹೆಚ್ಚಳವಾಗಿದೆ. ಗ್ರಾಹಕರು ಎನ್‌95 ಮಾಸ್ಕ್‌ಗಳನ್ನು ಹೆಚ್ಚಾಗಿ ಕೇಳುತ್ತಿದ್ದಾರೆ ಎಂದು ದೆಹಲಿಯ ಫಾರ್ಮಾಸಿಸ್ಟ್ ಒಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT