ನವದೆಹಲಿ: ದೇಶದ ಬೇರೆ ಬೇರೆ ರಾಜ್ಯಗಳಿಂದ ವರದಿಯಾಗಿರುವ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂದು ಮಹಿಳಾ ಹಕ್ಕುಗಳ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಒತ್ತಾಯಿಸಿವೆ.
ಕೆಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅತ್ಯಾಚಾರ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಅವು ಟೀಕಿಸಿವೆ.
ಅಖಿಲ ಭಾರತ ದಲಿತ ಮಹಿಳಾ ಅಧಿಕಾರ ಮಂಚ್, ಅಖಿಲ ಭಾರತ ಪ್ರಜಾತಾಂತ್ರಿಕ ಮಹಿಳಾ ಸಂಘಟನೆ, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸೇರಿದಂತೆ ಒಟ್ಟು 35 ಸಂಘಟನೆಗಳು ಜಂಟಿಯಾಗಿ ಹೇಳಿಕೆ ಬಿಡುಗಡೆ ಮಾಡಿವೆ.