ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ, ಶಾ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಅಂತ್ಯ: ಖರ್ಗೆ

Published 21 ಏಪ್ರಿಲ್ 2024, 11:00 IST
Last Updated 21 ಏಪ್ರಿಲ್ 2024, 11:00 IST
ಅಕ್ಷರ ಗಾತ್ರ

ಸತ್ನಾ (ಮಧ್ಯಪ್ರದೇಶ): 'ಮೋದಿ, ಅಮಿತ್‌ ಶಾ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯಗೊಳ್ಳುತ್ತದೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಭಾನುವಾರ ಮಧ್ಯಪ್ರದೇಶದ ಸತ್ನಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೇರೆ ಪಕ್ಷಗಳಲ್ಲಿ ಇರುವವರೆಗೂ ಭ್ರಷ್ಟರಾಗಿದ್ದವರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ಸಂವಿಧಾನ ರಕ್ಷಣೆಯಾಗಬೇಕಾದರೆ, ಮಹಿಳೆಯರ, ಕಾರ್ಮಿಕರ ಹಾಗೂ ರೈತರ ಮತದಾನದ ಹಕ್ಕು ಉಳಿಯಬೇಕಾದರೆ‌ ಕಾಂಗ್ರೆಸ್‌ನ ಹಸ್ತ ಚಿಹ್ನೆಗೆ ಮತ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.

ಸತ್ನಾ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ಧಾರ್ಥ್ ಕುಶ್ವಾಹ ಪರವಾಗಿ ಖರ್ಗೆ ಸಾತ್ನಾದಲ್ಲಿ ಸಾರ್ವಜನಿಕ ರ‍್ಯಾಲಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT