ನವದೆಹಲಿ: ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಭಾರತ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಮೇಲೆ ಸಿಂಧುದುರ್ಗ ಜಿಲ್ಲೆಯಲ್ಲಿ ಆರೋಪಿಯ ಮನೆ ಮತ್ತು ಅಂಗಡಿಯನ್ನು ಕೆಡವಿದ್ದಕ್ಕಾಗಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಮಹಾರಾಷ್ಟ್ರ ಅಧಿಕಾರಿಗಳಿಂದ ಪ್ರತಿಕ್ರಿಯೆ ಕೋರಿದೆ.

ಕಳೆದ ತಿಂಗಳು ನಡೆದ ಚಾಂಪಿಯನ್ಸ್ ಟ್ರೋಫಿಯ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಭಾರತ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ದೂರು ಸಲ್ಲಿಸಿದ ನಂತರ ಅಧಿಕಾರಿಗಳು ಆರೋಪಿಯ ಮನೆ ಧ್ವಂಸ ಮಾಡಿದ್ದಾರೆ ಎಂದು ಅರ್ಜಿದಾರರು ಹೇಳಿಕೊಂಡಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠ ನೋಟಿಸ್ ನೀಡಲು ಸೂಚಿಸಿದೆ.

ನಾಲ್ಕು ವಾರಗಳ ನಂತರ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಪೀಠ ಹೇಳಿದೆ.

ಆಸ್ತಿಗಳ ಧ್ವಂಸದ ಕುರಿತು ಸುಪ್ರೀಂ ಕೋರ್ಟ್ನ 2024ರ ನವೆಂಬರ್ 13ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಆ ತೀರ್ಪು ದೇಶದಾದ್ಯಂತ ಕಟ್ಟಡಗಳನ್ನು ನೆಲಸಮ ಮಾಡುವ ಕುರಿತಂತೆ ಮಾರ್ಗಸೂಚಿಗಳನ್ನು ನಿಗದಿಪಡಿಸಿದ್ದು, ಬಾಧಿತ ವ್ಯಕ್ತಿಯು ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ಒಳಗೊಂಡ ಪೂರ್ವ ಶೋಕಾಸ್ ನೋಟಿಸ್ ಇಲ್ಲದೆ ಕಟ್ಟಡ ಕೆಡವುವುದನ್ನು ತಡೆಹಿಡಿದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.