ನವದೆಹಲಿ: ಉತ್ತರ ದೆಹಲಿಯ ವಜೀರ್ಪುರದಲ್ಲಿ ಕೋಟಿಗಟ್ಟಲೆ ಮೌಲ್ಯದ ಅಮಾನ್ಯ ಮಾಡಿದ್ದ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗದು ಅಕ್ರಮ ಸಾಗಣೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದರು. ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ.
.ಇಂಡಿಗೊ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ತರಾಟೆ.ವಿಮಾನ ಸಂಚಾರ ವ್ಯತ್ಯಯ: ಸಮಗ್ರ ವರದಿಯೊಂದಿಗೆ ಹಾಜರಾಗಿ: ಇಂಡಿಗೊಗೆ ಡಿಜಿಸಿಎ ಸೂಚನೆ.
₹500 ಹಾಗೂ ₹1000 ಮುಖಬೆಲೆಯ ನೋಟುಗಳನ್ನು ಹೊಂದಿದ್ದ ಬ್ಯಾಗ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನೋಟು ಸಾಗಣೆಗಾಗಿ ಬಳಕೆ ಮಾಡಲಾದ ಎರಡು ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಈ ಹಣ ಎಲ್ಲಿಂದ ಬಂತು ಎಂದು ಪರಿಶೀಲಿಸಲಾಗುತ್ತಿದೆ. ಬಂಧಿತರನ್ನು ವಿಚಾರಣೆಗೊಳಪಡಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 2016ರ ನವೆಂಬರ್ನಲ್ಲಿ ₹500 ಹಾಗೂ ₹1000 ಮುಖಬೆಲೆಯ ನೋಟು ರದ್ದತಿ ನಿರ್ಧಾರವನ್ನು ಪ್ರಕಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.