ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ನೇಮಕ

Published 28 ಜೂನ್ 2024, 13:37 IST
Last Updated 28 ಜೂನ್ 2024, 13:37 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಭದ್ರತಾ ಉಪ ಸಲಹೆಗಾರ ವಿಕ್ರಮ್ ಮಿಸ್ರಿ ಅವರನ್ನು ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

‘ಮಿಸ್ರಿ ಅವರಿಗಿರುವ ರಾಷ್ಟ್ರೀಯ ಭದ್ರತಾ ಉಪ ಸಲಹೆಗಾರ ಅಧಿಕಾರವನ್ನು ಮೊಟಕುಗೊಳಿಸಿ, ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲು ಸಚಿವ ಸಂಪುಟದ ನೇಮಕಾತಿ ಇಲಾಖೆಯು ಅನುಮತಿ ನೀಡಿದ್ದು, ಜುಲೈ 15ರಿಂದ ಅವರ ಕಾರ್ಯಾವಧಿ ಆರಂಭವಾಗಲಿದೆ’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ ಶುಕ್ರವಾರ ಆದೇಶಿಸಿದೆ.

ಪ್ರಸ್ತುತ ವಿದೇಶಾಂಗ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿನಯ್‌ ಮೋಹನ್‌ ಕ್ವತ್ರ ಅವರ ಸೇವಾವಧಿಯು ಮಾರ್ಚ್‌ನಲ್ಲಿ ಮುಕ್ತಾಯವಾಗಬೇಕಿತ್ತು ಆದರೆ, ಸರ್ಕಾರ ಅವರ ಸೇವಾವಧಿಯನ್ನು 6 ತಿಂಗಳುಗಳ ಕಾಲ ವಿಸ್ತರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT