ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

RamNavami | ಅಯೋಧ್ಯೆಯಲ್ಲಿ ಮೊದಲ ರಾಮನವಮಿ ಸಂಭ್ರಮ, ಬಾಲರಾಮನಿಗೆ ಸೂರ್ಯ ತಿಲಕ

Published 17 ಏಪ್ರಿಲ್ 2024, 2:42 IST
Last Updated 17 ಏಪ್ರಿಲ್ 2024, 2:42 IST
ಅಕ್ಷರ ಗಾತ್ರ

ಅಯೋಧ್ಯೆ: ಶ್ರೀರಾಮನವಮಿ ಪ್ರಯುಕ್ತ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಸಾವಿರಾರು ಭಕ್ತರು ಅಯೋಧ್ಯೆಗೆ ಆಗಮಿಸಿದ್ದಾರೆ.

ರಾಮಮಂದಿರ ನಿರ್ಮಾಣಗೊಂಡ ನಂತರ ಆಚರಿಸಲಾಗುತ್ತಿರುವ ಮೊದಲ ರಾಮನವಮಿಗೆ ಅಯೋಧ್ಯೆ ಸಿಂಗಾರಗೊಂಡಿದೆ. ರಾಮನವಮಿ ವಿಶೇಷವಾಗಿ ದೇವರಾಹ ಹಂಸ ಬಾಬಾ ಟ್ರಸ್ಟ್ ರಾಮಮಂದಿರಕ್ಕೆ 1,11,111 ಕೆ.ಜಿ ಲಡ್ಡನ್ನು ಅರ್ಪಿಸಿದೆ.

ಮುಂಜಾನೆ 3:30ರಿಂದ ರಾತ್ರಿ 11 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಯೋಧ್ಯೆ ಬೀದಿಗಳನ್ನು ಎಲ್‌ಇಡಿ ಬಲ್ಬ್‌ಗಳಿಂದ ಶೃಂಗರಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಅಯೋಧ್ಯೆಯಾದ್ಯಂತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಬಾಲರಾಮನಿಗೆ ಸೂರ್ಯ ತಿಲಕ

ರಾಮನವಿಯಂದು ರಾಮ ಜನಿಸಿದ ಸಮಯಕ್ಕೆ ಸರಿಯಾಗಿ ಸೂರ್ಯನ ಕಿರಣ ಹಣೆಯ ಮೇಲೆ ಬರುವಂತೆ ಮಂದಿರವನ್ನು ವಿನ್ಯಾಸಗೊಳಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸೂರ್ಯನ ಕಿರಣ ಬಾಲರಾಮನ ಹಣೆಗೆ ಮುತ್ತಿಕ್ಕಲಿದೆ. 75 ಮಿ.ಮೀ. ಗಾತ್ರದ ಈ ಸೂರ್ಯ ತಿಲಕ ಸುಮಾರು ನಾಲ್ಕು ನಿಮಿಷಗಳ ಕಾಲ ಇರಲಿದ್ದು, ನಂತರ ಸರಿಯಲಿದೆ ಎಂದು ಟ್ರಸ್ಟ್ ತಿಳಿಸಿದೆ.

ವಿಐಪಿ ದರ್ಶನ ರದ್ದು

ರಾಮನವಮಿ ದಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆ ಏಪ್ರಿಲ್ 15ರಿಂದ 18ರವರೆಗೆ ವಿವಿಐಪಿ ಮತ್ತು ವಿಐಪಿ ದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಟ್ರಸ್ಟ್‌ನ ಸದಸ್ಯರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT