ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆ: ಮಕರ ಜ್ಯೋತಿ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

Last Updated 14 ಜನವರಿ 2023, 13:49 IST
ಅಕ್ಷರ ಗಾತ್ರ

ತಿರುವನಂತಪುರಂ: ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಸಂಭವಿಸುವ ಮಕರಜ್ಯೋತಿಯನ್ನು (ಮಕರವಿಳಕ್ಕು) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು

ಸಂಜೆ 6.50ರ ಸುಮಾರಿಗೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು.

ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಶನಿವಾರ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ–ಪುನಸ್ಕಾರಗಳು ಆಯೋಜನೆಗೊಂಡಿದ್ದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಮಕರಜ್ಯೋತಿ ದರ್ಶನದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು. ಮಕರಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡರು.

ಭಕ್ತ ಸಮೂಹದ ನಿರ್ವಹಣೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಮತ್ತು ಅದರ ಸುತ್ತಮುತ್ತ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT