ಮುಂಬೈ: ಹಬ್ಬಗಳ ಸಂದರ್ಭದಲ್ಲಿ ವಿಮಾನದಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ವಿಮಾನಗಳನ್ನು ನಿಯೋಜಿಸುವಂತೆ ಹಾಗೂ ಹೆಚ್ಚಿನ ಪ್ರಯಾಣ ದರ ವಿಧಿಸದಂತೆ ಕ್ರಮಕೈಗೊಳ್ಳುವಂತೆ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ನಿರ್ದೇಶಿಸಿದೆ.

ಹಬ್ಬಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗುತ್ತಿರುವುದಕ್ಕೆ ವಿಮಾನಯಾನ ಸಂಸ್ಥೆಗಳು ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದ ವಿರುದ್ಧ ಪ್ರಯಾಣಿಕರಿಂದ ಆಕ್ಷೇಪಗಳು ಕೇಳಿಬಂದಿದ್ದವು.

ಇದನ್ನು ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ), ಪ್ರಯಾಣ ದರಗಳ ಬಗ್ಗೆ ಗಮನಹರಿಸುವಂತೆ ಸಚಿವಾಲಯಕ್ಕೆ ಸೂಚಿಸಿದೆ. ಅಲ್ಲದೇ, ದರ ಹೆಚ್ಚಳ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶಿಸಿದೆ.

ಪ್ರಯಾಣಿಕರು ಹೆಚ್ಚಾಗಿ ತೆರಳುವ ಪ್ರದೇಶಗಳ ಮಾರ್ಗವಾಗಿ ಹೆಚ್ಚುವರಿ ವಿಮಾನಗಳನ್ನು ನಿಯೋಜಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ತಿಳಿಸಿದೆ.

ಅದರಂತೆ ಇಂಡಿಗೊ ಸಂಸ್ಥೆಯು 730 , ಏರ್ ಇಂಡಿಯಾ 486, ಸ್ಪೈಸ್ಜೆಟ್ 546 ವಿಮಾನಗಳನ್ನು ಹೆಚ್ಚುವರಿಯಾಗಿ ನಿಯೋಜಿಸುವ ಭರವಸೆ ನೀಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.