ನವದೆಹಲಿ: ವಿಮಾನ ಕಾರ್ಯಾಚರಣೆಯಲ್ಲಿ ಉಂಟಾದ ವ್ಯತ್ಯಯ ಬಗ್ಗೆ ವಿವರವಾದ ಉತ್ತರ ನೀಡಲು ಹೆಚ್ಚಿನ ಸಮಯ ನೀಡುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ(ಡಿಜಿಸಿಎ) ಇಂಡಿಗೊ ಮನವಿ ಮಾಡಿದೆ.

ಸೋಮವಾರ ಸಂಜೆ ಡಿಜಿಸಿಎ ನೀಡಿದ್ದ ಶೋಕಾಸ್ ನೋಟಿಸ್ಗೆ ಪ್ರತಿಕ್ರಿಯಿಸಿರುವ ಇಂಡಿಗೊ, ಇಷ್ಟು ಕಡಿಮೆ ಸಮಯದಲ್ಲಿ ನಿಖರವಾದ ಕಾರಣವೇನು ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದಿದೆ.

ಏಕಾಏಕಿ ಸಾವಿರಾರು ವಿಮಾನಗಳ ಹಾರಾಟವನ್ನು ರದ್ದುಪಡಿಸಿದ ಬಗ್ಗೆ ಕಾರಣ ಕೇಳಿ ಡಿಜಿಸಿಎ ಶನಿವಾರ ಇಂಡಿಗೊ ಮುಖ್ಯಸ್ಥರಿಗೆ ಶೋಕಾಸ್ ನೋಟಿಸ್ ನೀಡಿತ್ತು.

ಡಿಜಿಸಿಎಗೆ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ ಗ್ರಾಹಕರಿಗೆ ಉಂಟಾದ ಅನಾನುಕೂಲತೆ ಮತ್ತು ತೊಂದರೆಗಳಿಗೆ ಇಂಡಿಗೊ ಕ್ಷಮೆಯಾಚಿಸಿದೆ. ಅಲ್ಲದೇ, 'ರೂಟ್ ಕಾಸ್ ಅನಾಲಿಸಿಸ್' (ಆರ್ಸಿಎ) ನಡೆಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದಿದೆ.

ಇದೇ ವೇಳೆ ವಿಮಾನ ಕಾರ್ಯಾಚರಣೆಯಲ್ಲಾದ ಅಡ್ಡಿಗೆ ಪ್ರಾಥಮಿಕ ಕಾರಣಗಳನ್ನು ಪಟ್ಟಿ ಮಾಡಿರುವ ಅದು, ಸಣ್ಣ ತಾಂತ್ರಿಕ ದೋಷಗಳು, ಚಳಿಗಾಲದ ಆರಂಭಕ್ಕೆ ಸಂಬಂಧಿಸಿದ ವೇಳಾಪಟ್ಟಿ ಬದಲಾವಣೆಗಳು, ಪ್ರತಿಕೂಲ ಹವಾಮಾನ ಪರಿಸ್ಥಿತಿ, ವಾಯುಯಾನ ವ್ಯವಸ್ಥೆಯಲ್ಲಿ ಹೆಚ್ಚಿದ ದಟ್ಟಣೆ ಮತ್ತು ನವೀಕರಿಸಿದ ಸಿಬ್ಬಂದಿ ರೋಸ್ಟರಿಂಗ್ ನಿಯಮ ಅಡಚಣೆಗೆ ಕಾರಣವಾಗಿದೆ ಎಂದು ಹೇಳಿದೆ.

ಮುಂದುವರಿದು, ವಿಮಾನ ಕರ್ತವ್ಯ ಸಮಯ ಮಿತಿ (ಎಫ್ಡಿಟಿಎಲ್) ಹಂತ 2 ಅನ್ನು ಅನುಷ್ಠಾನಗೊಳಿಸುವಲ್ಲಿನ ಸವಾಲುಗಳ ಕುರಿತು ಡಿಜಿಸಿಎ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದೂ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.