ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕರು (ಡಿಜಿಎಂಒ) ಕದನ ವಿರಾಮ ಒಪ್ಪಂದ ಕುರಿತು ಚರ್ಚಿಸಿದ್ದಾರೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಡಾರ್ ಗುರುವಾರ ಹೇಳಿದ್ದಾರೆ.

ನಾಲ್ಕು ದಿನಗಳ ಸೇನಾ ಸಂಘರ್ಷದ ಬಳಿಕ ಉಭಯ ದೇಶಗಳು ಮೇ 10ರಂದು ಕದನ ವಿರಾಮ ಒಪ್ಪಂದ ಮಾಡಿಕೊಂಡಿದ್ದವು.

‘ಪಾಕಿಸ್ತಾನದ ಡಿಜಿಎಂಒ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ಮತ್ತು ಭಾರತದ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಯಿ ಅವರು ಬುಧವಾರ ಮಾತುಕತೆ ನಡೆಸಿದ್ದಾರೆ’ ಎಂದು ಡಾರ್ ಅವರು ಪಾಕ್ ಸಂಸತ್ತಿಗೆ ತಿಳಿಸಿದ್ದಾರೆ. ಆದರೆ ಅವರ ಹೇಳಿಕೆ ಬಗ್ಗೆ ಭಾರತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮಾತುಕತೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳ ಬಹಿರಂಗವಾಗಿಲ್ಲ. ಆದರೆ, ಜಿಯೊ ನ್ಯೂಸ್ಗೆ ನೀಡಿದ ಹೇಳಿಕೆಯಲ್ಲಿ ಡಾರ್, ‘ಕದನ ವಿರಾಮವನ್ನು ಮೇ 18ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.