ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಇಂದು (ಬುಧವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಭವನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಅನಾರೋಗ್ಯದ ಕಾರಣ ನೀಡಿ ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರು. ಧನಕರ್ ರಾಜೀನಾಮೆ ಸೇರಿದಂತೆ ವಿವಿಧ ವಿಷಯಗಳನ್ನು ಇಟ್ಟುಕೊಂಡು ಉಭಯ ಸದನಗಳ ಕಲಾಪಗಳಿಗೆ ವಿರೋಧ ಪಕ್ಷಗಳು ನಿರಂತರವಾಗಿ ಅಡ್ಡಿಪಡಿಸುತ್ತಿರುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಮೋದಿ ಇಂದು (ಬುಧವಾರ) ಮಾಲ್ಡೀವ್ಸ್ ಮತ್ತು ಬ್ರಿಟನ್ಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭೇಟಿಯು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
.ರಾಜೀನಾಮೆ ಘೋಷಣೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದ ಧನಕರ್.ಧನಕರ್ಗೆ RSS, BJP ಬಗ್ಗೆ ನಿಷ್ಠೆ ಇತ್ತು, ಆದರೆ… ರಾಜೀನಾಮೆ ಬಗ್ಗೆ ಖರ್ಗೆ ಸಂಶಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.