ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೌಶಲ್ಯ ಅಭಿವೃದ್ಧಿ ಖಾತೆ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ಅಧಿಕಾರ ಸ್ವೀಕಾರ

Last Updated 8 ಜುಲೈ 2021, 11:31 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆ ಸದಸ್ಯ ಧರ್ಮೇಂದ್ರ ಪ್ರಧಾನ್‌ ಅವರು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು. ಮಾತ್ರವಲ್ಲದೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ನಿಭಾಯಿಸಲಿದ್ದಾರೆ.

ಶಿಕ್ಷಣ ಖಾತೆಯನ್ನು ಈ ಮೊದಲು ರಮೇಶ್‌ ಪೋಖ್ರಿಯಾಲ್‌ ವಹಿಸಿಕೊಂಡಿದ್ದರು. ಹಾಗೆಯೇ ಪ್ರಧಾನ್‌ ಅವರು ಈ ಮೊದಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಉಕ್ಕು ಖಾತೆಯ ಸಚಿವರಾಗಿದ್ದರು. ಪೆಟ್ರೋಲಿಯಂ ಖಾತೆಯನ್ನು ಸದ್ಯ ಹರ್‌ದೀಪ್‌ ಸಿಂಗ್‌ ಪುರಿ ಅವರಿಗೆ ವಹಿಸಲಾಗಿದೆ.

52‌ ವರ್ಷದ ಪ್ರಧಾನ್ 2018ರ ಏಪ್ರಿಲ್‌ನಲ್ಲಿ ಗೆಲ್ಲುವ ಮೂಲಕ ರಾಜ್ಯಸಭೆಗೆ ಎರಡನೇ ಬಾರಿಗೆ ಆಯ್ಕೆಯಾದರು.

ಮೋದಿ ಸರ್ಕಾರವು ಎರಡನೇ ಅವಧಿಗೆ 2019ರ ಮೇನಲ್ಲಿ ರೂಪುಗೊಂಡ ಬಳಿಕ ಇದೇ ಮೊದಲ ಸಲ ಸಚಿವ ಸಂಪುಟ ವಿಸ್ತರಣೆಯಾಗಿದೆ. ರಾಷ್ಟ್ರಪತಿ ಭವನದಲ್ಲಿ ಕೋವಿಡ್‌-19 ಮಾರ್ಗಸೂಚಿಗೆ ಅನುಗುಣವಾಗಿ ಬುಧವಾರ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಒಟ್ಟು 43 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT