ಬೆಂಗಳೂರು: ‘ಹಿಂದಿ ರಾಷ್ಟ್ರೀಯ ಭಾಷೆಯಲ್ಲ. ಅದು ರಾಷ್ಟ್ರೀಯ ಭಾಷೆ ಎಂದು ಯಾರೂ ಹೇಳಿಲ್ಲ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು.

‘ಹಿಂದಿ ರಾಷ್ಟ್ರ ಭಾಷೆ’ ಎಂಬ ನಟ ಅಜಯ್ ದೇವಗನ್ ಹೇಳಿಕೆ ಕುರಿತು ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನಾವು ಹಿಂದಿ ಹೇರಿಕೆ ಕೂಡಾ ಮಾಡುವುದಿಲ್ಲ. ಇಂಥದ್ದೇ ಭಾಷೆ ಕಲಿಯಬೇಕು ಎಂದು ಯಾರ ಮೇಲೂ ಒತ್ತಡ ಹಾಕಲು ಆಗುವುದಿಲ್ಲ’ ಎಂದು ಹೇಳಿದರು.

ಚರ್ಚೆಗೆ ಗ್ರಾಸವಾದ ನಟ ಸುದೀಪ್ ಹೇಳಿಕೆ: ಹಿಂದಿ ಬಗ್ಗೆ ಬಿಜೆಪಿಯಲ್ಲಿ ಭಿನ್ನ ಸ್ವರ

‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕೂಡಾ ಮಾತೃಭಾಷೆ ಹಾಗೂ ಸ್ಥಳೀಯ ಭಾಷೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ವಿದ್ಯಾರ್ಥಿಗಳು ಇಚ್ಚಿಸುವ ಭಾಷೆಯಲ್ಲಿ ಕಲಿಯಬಹುದು. ಯಾರು ಕೂಡಾ ಯಾವ ಭಾಷೆಯನ್ನೂ ಹೇರಿಕೆ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಹಿಂದಿ ರಾಷ್ಟ್ರ ಭಾಷೆ ಎಂದ ಅಜಯ್ ದೇವಗನ್ ಹೇಳಿಕೆಗೆ ನಟಿ ರಮ್ಯಾ ಕಿಡಿ

ಹಿಂದಿ ರಾಷ್ಟ್ರ ಭಾಷೆ ಹೌದೇ ಅಲ್ಲವೇ ಎಂಬ ಬಗ್ಗೆ ಕನ್ನಡದ ನಟ ಸುದೀಪ್ ಮತ್ತು ಹಿಂದಿ ನಟ ಅಜಯ್ ದೇವಗನ್ ಮಧ್ಯೆ ನಡೆದ ಟ್ವೀಟ್ ಸಮರ ರಾಜಕೀಯ ಆಯಾಮ ಪಡೆದುಕೊಂಡಿತ್ತು. ‘ಕನ್ನಡವೇ ಸಾರ್ವಭೌಮ ಭಾಷೆ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದೀಪ್ ಅವರನ್ನು ಬೆಂಬಲಿಸಿದ್ದರು.

ನೋಡಿ: ಟ್ವೀಟ್ ಕಿಚ್ಚು- ಕಿಚ್ಚ ಸುದೀಪ್ V/S ಅಜಯ್ ದೇವಗನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.