ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲ್ಮಾನ್ ಖಾನ್‌ ತಂಗಿಯ ಮನೆಯಲ್ಲಿ ಕಳ್ಳತನ!

Published 17 ಮೇ 2023, 13:42 IST
Last Updated 17 ಮೇ 2023, 13:42 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮುದ್ದಿನ ತಂಗಿ ಅರ್ಪಿತ ಖಾನ್‌ ಮನೆಯಲ್ಲಿ ಐದು ಲಕ್ಷ ಮೌಲ್ಯದ ವಜ್ರದ ಆಭರಣವೊಂದು ಕಳ್ಳತನವಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮನೆ ಕೆಲಸದವನನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಅದಾದ ಮರುದಿನ ಸಂದೀಪ್‌ ಹೆಗ್ಡೆ(30) ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

‘ಆರೋಪಿ ಸಂದೀಪ್‌ ಹೆಗ್ಡೆ ಅರ್ಪಿತಾ ಖಾನ್‌ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದನು. ಮನೆಯಿಂದ ಐದು ಲಕ್ಷ ಮೌಲ್ಯದ ವಜ್ಯದ ಆಭರಣವನ್ನು ತೆಗೆದುಕೊಂಡು ಪರಾರಿಯಾಗಿದ್ದನು. ಕಳ್ಳತನವಾಗಿರುವ ವಿಷಯ ತಿಳಿಯುತ್ತಿದ್ದಂತೆ ಅರ್ಪಿತಾ ಖಾನ್‌ ಅವರು ದೂರು ನೀಡಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಲಾಗಿದೆ‘ ಎಂದು ಪೊಲೀಸರು ತಿಳಿಸಿದ್ದಾರೆ.

‘ಅಕ್ಷತಾ ಖಾನ್‌ ಅವರ ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ತಾಂತ್ರಿಕ ಸಹಾಯ ಹಾಗೂ ಇತರ ಮಾಹಿತಿಗಳಿಂದ ಆರೋಪಿಯು ಥಾಣೆಯಲ್ಲಿ ಇರುವುದು ಪತ್ತೆಯಾಗಿದೆ. ಅಲ್ಲಿಂದ ಆರೋಪಿಯನ್ನು ಬಂಧಿಸಲಾಗಿದೆ‘ ಎಂದರು.

ಪ್ರಕರಣಕ್ಕೆ ಸಂಬಂಧಪ‍ಟ್ಟಂತೆ ಐಪಿಸಿ ಸೆಕ್ಷನ್‌ 381(ಗುಮಾಸ್ತ ಅಥವಾ ಸೇವಕನಿಂದ ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT