ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ವಿಮಾನ ನಿಲ್ದಾಣ:  ₹6.46 ಕೋಟಿ ಮೌಲ್ಯದ ವಜ್ರ ಮತ್ತು ಚಿನ್ನ ವಶ

Published 23 ಏಪ್ರಿಲ್ 2024, 16:08 IST
Last Updated 23 ಏಪ್ರಿಲ್ 2024, 16:08 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯು ಪ್ರಯಾಣಿಕರು ಅಕ್ರಮವಾಗಿ ದೇಹದ ಭಾಗ, ನೂಡಲ್ಸ್ ಪ್ಯಾಕೆಟ್‌ ಮತ್ತು ತಮ್ಮ ಸರಕು ಸಾಮಾನುಗಳಲ್ಲಿ ಸಾಗಿಸುತ್ತಿದ್ದ ಸುಮಾರು 6.46 ಕೋಟಿ ಮೌಲ್ಯದ ವಜ್ರ ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾರಾಂತ್ಯದಲ್ಲಿ ₹4.44 ಕೋಟಿ ರೂಪಾಯಿ ಮೌಲ್ಯದ 6.815 ಕೆ.ಜಿ. ಚಿನ್ನ ಮತ್ತು ವಜ್ರಗಳನ್ನು ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ.

ಮುಂಬೈನಿಂದ ಬ್ಯಾಂಕಾಕ್‌ಗೆ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ಪರೀಕ್ಷಿಸಿದಾಗ ತನ್ನ ಟ್ರಾಲಿ ಬ್ಯಾಗ್‌ನಲ್ಲಿ ನೂಡಲ್ಸ್ ಪ್ಯಾಕೆಟ್‌ಗಳಲ್ಲಿ ಬಚ್ಚಿಟ್ಟು ವಜ್ರಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದ್ದು, ನಂತರ ಅವರನ್ನು ಬಂಧಿಸಲಾಗಿದೆ. ಎಂದು ಅಧಿಕಾರಿಗಳು ತಿಳಿಸಿದರು.

ಕೊಲಂಬೊದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರನ್ನು ತಡೆಹಿಡಿಯಲಾಗಿದ್ದು, ಆಕೆಯ ಒಳ ಉಡುಪಿನಲ್ಲಿ 321 ಗ್ರಾಂ ತೂಕದ ಚಿನ್ನದ ತುಂಡುಗಳು ಮತ್ತು ಕಟ್ ಪೀಸ್ ಅನ್ನು ಸಾಗಿಸುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಅಲ್ಲದೆ, ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು ಮತ್ತು ಬಹರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಪ್ರಯಾಣಿಸುತ್ತಿದ್ದ 10 ಭಾರತೀಯ ಪ್ರಜೆಗಳನ್ನು ತಡೆದು  ಸುಮಾರು ₹4.04 ಕೋಟಿ ಮೌಲ್ಯದ  6.199 ಕೆ.ಜಿ. ಚಿನ್ನ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT