ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಲಕ್ಷ್ಮಿ ತೋಮರ್ (24) ಮತ್ತು ದೀಕ್ಷಾ ಜಾಡೋನ್ (25) ಎಂದು ಗುರುತಿಸಲಾಗಿದೆ. ಗಣೆಶೋತ್ಸವ ಭಾಗವಹಿಸಿದ್ದ ಯುವತಿಯರು ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಖಜ್ರಾನಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಕಾರಿನ ಚಾಲಕ ಗಜೇಂದ್ರ ಪ್ರತಾಪ್ ಸಿಂಗ್ (28) ತನ್ನ ಸ್ನೇಹಿತನ ಬರ್ತ್ ಡೇ ಪಾರ್ಟಿಗೆ ಹೋಗುವ ಸಲುವಾಗಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಬಿಎಂಡಬ್ಲ್ಯು ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆಯಿತು. ಡಿಕ್ಕಿಯ ರಭಸಕ್ಕೆ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವಿಗೀಡಾಗಿದ್ದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವುದಾಗಿ
ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದು, ಅತಿವೇಗದ ಚಾಲನೆ ಮತ್ತು ನರಹತ್ಯೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಲಕ್ಷ್ಮಿ ಅವರು ಇಂದೋರ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ಗ್ವಾಲಿಯರ್ ಮೂಲದ ದೀಕ್ಷಾ ಅವರು ಸರ್ಕಾರಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.