ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ

Published 12 ಆಗಸ್ಟ್ 2023, 11:29 IST
Last Updated 12 ಆಗಸ್ಟ್ 2023, 11:29 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್‌ನಲ್ಲಿ ಅಂಗೀಕಾರಗೊಂಡಿದ್ದ ‘ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ–2023’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಶನಿವಾರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರು ಹೇಳಿದ್ದಾರೆ. ಆ ಮೂಲಕ ಅದು ಕಾನೂನಾಗಿ ಜಾರಿಗೆ ಬಂದಿದೆ.

ದೇಶದ ನಾಗರಿಕರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಣೆಗೊಳಿಸುವ ಇರಾದೆ ಈ ಕಾನೂನಿಗೆ ಇದ್ದು, ದತ್ತಾಂಶವನ್ನು ದುರ್ಬಳಕೆ ಮಾಡಿಕೊಂಡರೆ ಅಂಥ ಕಂಪನಿಗಳಿಗೆ ₹ 250 ಕೋಟಿವರೆಗೆ ದಂಡ ವಿಧಿಸುವ ಅವಕಾಶ ಇದೆ.

‘ಖಾಸಗಿತನ ಹಕ್ಕ’ನ್ನು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್‌ ಘೋಷಿಸಿದ ಆರು ವರ್ಷಗಳ ನಂತರ ಈ ಕಾನೂನು ರಚನೆಯಾಗಿದೆ. ಆನ್‌ಲೈನ್‌ ವೇದಿಕೆಗಳಲ್ಲಿ ಜನರ ವೈಯಕ್ತಿಕ ದತ್ತಾಂಶ ದುರ್ಬಳಕೆಯಾಗುವುದನ್ನು ತಡೆಯುವ ಅವಕಾಶಗಳು ಈ ಕಾನೂನಿನಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT