ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರ ಮಟ್ಟಕ್ಕೆ ಕಡಿತಗೊಳಿಸಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇಂಧನ ದರ ಏರಿಕೆಗೆ ಸಂಬಂಧಿಸಿ ಟ್ವೀಟ್ ಮಾಡಿರುವ ಅವರು, ‘ಮೋದಿಯವರಿಗೆ ನಿಜವಾಗಿಯೂ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಮನಸ್ಸಿದ್ದರೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಲಿ. ಇದರಿಂದ ಪೆಟ್ರೋಲ್ ಹಾಗೂಡೀಸೆಲ್ ದರ ಇನ್ನೂ ₹18ರಷ್ಟು ಕಡಿಮೆಯಾಗಲಿದೆ. ಬಹುಶಃ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಅವರು ಆ ನಿರ್ಧಾರ ಕೈಗೊಳ್ಳಬಹುದು’ ಎಂದು ಉಲ್ಲೇಖಿಸಿದ್ದಾರೆ.

ಓದಿ:ಎಕ್ಸೈಸ್ ಸುಂಕ ಇಳಿಕೆಯಿಂದ ಬೊಕ್ಕಸಕ್ಕೆ ₹45 ಸಾವಿರ ಕೋಟಿ ನಷ್ಟ

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕ್ರಮವಾಗಿ ₹5 ಮತ್ತು ₹10ರಷ್ಟು ಕಡಿತಗೊಳಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಿಸಿತ್ತು. ಆ ಬಳಿಕ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳೂ ತೆರಿಗೆ ಕಡಿತ ನಿರ್ಧಾರ ಪ್ರಕಟಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.