ಲಖನೌ: ಪಾರ್ಟಿಗಳಲ್ಲಿ ಹಾವಿನ ವಿಷ ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಿದ್ಧಾರ್ಥ್ ಯಾದವ್ ಅಲಿಯಾಸ್ ಎಲ್ವಿಶ್ ಯಾದವ್ ಹಾಗೂ ಇತರರಿಗೆ ಸೇರಿದ ₹52.49 ಲಕ್ಷ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿರುವ ಕೃಷಿ ಭೂಮಿ, ಹರಿಯಾಣದ ಮೂಲದ ಗಾಯಕ ರಾಹುಲ್ ಯಾದವ್ ಅಲಿಯಾಸ್ ರಾಹುಲ್ ಫಝಿಲ್‌ಪುರಿಯಗೆ ಸೇರಿದ ಬ್ಯಾಂಕ್ ಖಾತೆಗಳು ಹಾಗೂ ಸ್ಕೈ ಡಿಜಿಟಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Directorate of Enforcement (ED), Lucknow Zonal Office provisionally attached properties worth Rs. 52.49 Lakhs under the provisions of PMLA, 2002 in the “Wildlife case”. The attached properties are in the form of agriculture land in Bijnor district of Uttar Pradesh and bank… pic.twitter.com/Xq2XYN4AdW
— ANI (@ANI) September 27, 2024
ಈಚೆಗೆ ಪಾರ್ಟಿಗಳಲ್ಲಿ ಹಾವಿನ ವಿಷ ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಇ.ಡಿಯು ಎಲ್ವಿಶ್ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.
ಎಲ್ವಿಶ್ ಯಾದವ್ ಮತ್ತು ಅವರ ಇತರ 6 ಜನರ ವಿರುದ್ಧ ಉತ್ತರಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ಪೊಲೀಸರು ಕಳೆದ ವರ್ಷ ನವೆಂಬರ್ 3ರಂದು ಎಫ್‌ಐಆರ್ ದಾಖಲಿಸಿ, ಬಳಿಕ 1200 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಈ ಸಂಬಂಧ ಇ.ಡಿಯು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ದೂರು ದಾಖಲಿಸಿಕೊಂಡಿತ್ತು.
ಜುಲೈ ಎರಡನೇ ವಾರವೇ ಎಲ್ವಿಶ್ ಅವರಿಗೆ ಸಮನ್ಸ್ ಜಾರಿಯಾಗಿತ್ತು. ಆದರೆ, ವಿದೇಶಿ ಪ್ರವಾಸ ಮತ್ತು ವೈಯುಕ್ತಿಕ ಕಾರಣಕ್ಕಾಗಿ ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.