ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಶಿಮಠದಲ್ಲಿ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ ಸ್ಥಾಪನೆ

Last Updated 21 ಫೆಬ್ರುವರಿ 2023, 14:18 IST
ಅಕ್ಷರ ಗಾತ್ರ

ಡೆಹ್ರಾಡೂನ್ (ಪಿಟಿಐ): ಬದರೀನಾಥ ತೀರ್ಥಯಾತ್ರೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವ ಸಲುವಾಗಿ ಭೂಕುಸಿತ ಪೀಡಿತ ಜೋಶಿಮಠದಲ್ಲಿ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ ಸ್ಥಾಪಿಸಲಾಗುವುದು ಮತ್ತು ಗಡಿ ರಸ್ತೆಗಳ ಸಂಘಟನೆಯ (ಬಿಆರ್‌ಒ) ತಂಡವನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಚಾರ್‌ಧಾಮ್ ಯಾತ್ರೆಗೆ ಪೂರ್ವಸಿದ್ಧತೆ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್‌ ಧಾಮಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.

ಬಿಆರ್‌ಒ ಹಾನಿಗೊಳಗಾಗುವ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡಲಿದೆ ಎಂದು ಮುಖ್ಯಮಂತ್ರಿ ಧಾಮಿ ತಿಳಿಸಿದ್ದಾರೆ. ರಸ್ತೆಗಳು ಶೇ 100ರಷ್ಟು ಗುಂಡಿ ಮುಕ್ತವಾಗಿರಬೇಕು ಎಂದು ಲೋಕೋಪಯೋಗಿ ಇಲಾಖೆಗೆ ಅವರು ಸೂಚಿಸಿದ್ದಾರೆ.

ಬದರೀನಾಥ, ಹೇಮಕುಂಡ ಸಾಹಿಬ್‌ ಮತ್ತು ಅಂತರರಾಷ್ಟ್ರೀಯ ಸ್ಕೀಯಿಂಗ್‌ ತಾಣ ಔಲಿಗೆ ತೆರಳಲು ಜೋಶಿಮಠವೇ ಹೆಬ್ಬಾಗಿಲು. ಆದರೆ ಕಟ್ಟಡಗಳು, ರಸ್ತೆಗಳು ಮತ್ತು ಸಾರ್ವಜನಿಕ ಸೌಲಭ್ಯಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಏಪ್ರಿಲ್ 27ರಂದು ಬದರೀನಾಥ ಯಾತ್ರೆ ಪ್ರಾರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT