ಮುಂಬೈ: ‘ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕಿ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಶಾಸಕ (ಯುಬಿಟಿ ಬಣ) ಆದಿತ್ಯ ಠಾಕ್ರೆ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ದಿಶಾ ತಂದೆ ಸತೀಶ್ ಸಾಲಿಯಾನ್ ಅವರು ಮಂಗಳವಾರ ಜಂಟಿ ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ.

ದಕ್ಷಿಣ ಮುಂಬೈನಲ್ಲಿರುವ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಕಚೇರಿಗೆ ತಮ್ಮ ವಕೀಲರ ಜೊತೆಗೆ ಬಂದ ಅವರು ಈ ಒತ್ತಾಯ ಮಾಡಿದ್ದಾರೆ.
.ಸುಶಾಂತ್ ಸಿಂಗ್ ರಜಪೂತ್ ಜೀವನ ತೆರೆಗೆ?.ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತ ಆಲಿಯಾ ಸಂತಾಪಕ್ಕೆ ಆಕ್ರೋಶ.
ಮಗಳ ಸಾವಿಗೆ ಸಂಬಂಧಿಸಿದಂತೆ, ಹಲವು ಅನುಮಾನಗಳಿದ್ದು ಹೊಸತಾಗಿ ತನಿಖೆ ನಡೆಸಬೇಕು ಎಂದು ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.

‘ದಿಶಾ ಮೇಲೆ ಅತ್ಯಾಚಾರವೆಸಗಿ, ಕೊಲೆಗೈಯಲಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾದ ರಾಜಕೀಯ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗುತ್ತಿದೆ’ ಎಂದು ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.

ಏಪ್ರಿಲ್ ಮೊದಲ ವಾರದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ.

‘ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ನ್ಯಾಯಾಲಯದಲ್ಲಿಯೇ ಉತ್ತರಿಸುತ್ತೇನೆ’ ಎಂದು ಶಾಸಕ ಆದಿತ್ಯ ಠಾಕ್ರೆ ತಿಳಿಸಿದ್ದಾರೆ. ‘ನನ್ನ ಮಗಳ ಸಾವಿಗೆ ನ್ಯಾಯ ನಿರೀಕ್ಷಿಸುತ್ತಿದ್ದೇನೆ’ ಎಂದು ದಿಶಾ ಅವರ ತಂದೆ ಸತೀಶ್ ಸಾಲಿಯಾನ್ ತಿಳಿಸಿದ್ದಾರೆ.
.ಭೀಕರ ಅಪಘಾತ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ಸಂಬಂಧಿಗಳ ದುರ್ಮರಣ.ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ: ಸಿಬಿಐ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.