ಬೆಂಗಳೂರು: ನವದೆಹಲಿಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟವು ಸಾರ್ವಜನಿಕ ಸಾರಿಗೆ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಅಂತರರಾಜ್ಯ ರಸ್ತೆ ಸಾರಿಗೆ ನಿಗಮಗಳ ವಾಲಿಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಕೆಎಸ್‌ಆರ್‌ಟಿಸಿ ದ್ವಿತೀಯ ಪ್ರಶಸ್ತಿ ಗಳಿಸಿದೆ.
ಸಿಂಗಲ್ಸ್ ಮತ್ತು ಡಬಲ್ಸ್ ಎರಡರಲ್ಲಿಯೂ ದ್ವಿತೀಯ ಸ್ಥಾನ ಪಡೆದಿದೆ. ಮುಖ್ಯ ಕಾನೂನು ಅಧಿಕಾರಿ ಪ್ರಸನ್ನಕುಮಾರ್ ಬಾಳಾನಾಯ್ಕ, ಮಂಗಳೂರು ವಿಭಾಗ ಹಿರಿಯ ನಿಯಂತ್ರಣಾಧಿಕಾರಿ ಎಂ. ರಾಜೇಶ್ ಶೆಟ್ಟಿ, ಸಿಬ್ಬಂದಿ ಮೇಲ್ವಿಚಾರಕ ಕೆ. ಅಶ್ವಥನಾರಾಯಣ, ಪಾರುಪತ್ತೇಗಾರ ವಿ. ಹರೀಶ್, ಚಾಲಕ/ನಿರ್ವಾಹಕ ಜಿ.ಎಸ್. ಜಗನ್ನಾಥ ಪ್ರಶಸ್ತಿ ಪಡೆದಿದ್ದಾರೆ.
ಬ್ಯಾಡ್ಮಿಂಟನ್ ಮತ್ತು ವಾಲಿಬಾಲ್ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಒಟ್ಟು 15 ಕ್ರೀಡಾಪಟುಗಳಿಗೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ತಲಾ ₹5,000 ನಗದು ಘೋಷಣೆ ಮಾಡಿದ್ದಾರೆ. ಕಾರ್ಮಿಕ ಕಲ್ಯಾಣ ವಿಭಾಗದ ಮುಖ್ಯ ಅಧಿಕಾರಿ ಎಚ್.ಡಿ. ಗೌರಾಂಬ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.