ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು

ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಮತ್ತು 12 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
.ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್.
ವಿಧಾಸಭೆಯಿಂದ ವಿಧಾನಪರಿಷತ್ತಿಗೆ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಿಸಿದೆ.

ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬುಧವಾರ ಅಖೈರು ಮಾಡಿದೆ.

ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಮಲ್ಲವಳ್ಳಿ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮಗೊಳಿಸಿದ್ದಾರೆ.
.ವಿಧಾನ ಪರಿಷತ್ ಚುನಾವಣೆ: ಹರಿಪ್ರಸಾದ್ ಸೇರಿ ನಾಲ್ವರಿಗೆ ಕಾಂಗ್ರೆಸ್ ಟಿಕೆಟ್.
ಚಿಂಚೋಳಿ(ಕಲಬುರಗಿ ಜಿಲ್ಲೆ): ವಿವಾದಿತ ಜಮೀನಿನ ಸಮೀಕ್ಷೆ ತೆರಳಿದ್ದ ವೇಳೆ ಕರ್ನಾಟಕದ ಅಧಿಕಾರಿಗಳ ಮೇಲೆ ತೆಲಂಗಾಣದ ಜನರು ಕಲ್ಲು ತೂರಾಟ ನಡೆಸಿ ಭಯದ ವಾತಾವರಣ ಸೃಷ್ಟಿಸಿದ್ದ ಘಟನೆ ತಾಲ್ಲೂಕಿನ ಶಾದಿಪುರದ ಸರ್ವೆ ನಂಬರ್ 126ರಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
.ಕರ್ನಾಟಕದ ಅಧಿಕಾರಿಗಳ ಮೇಲೆ ತೆಲಂಗಾಣದ ಜನರಿಂದ ಕಲ್ಲು ತೂರಾಟ.
ನವದೆಹಲಿ: ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಎಐಸಿಸಿ ಬುಧವಾರ ರಾತ್ರಿ ನೇಮಕ ಮಾಡಿದೆ.
.ಕೆಪಿಸಿಸಿಗೆ ಬಿ.ಕೆ ಹರಿಪ್ರಸಾದ್ ಸಾರಥ್ಯ: ಈಡಿಗ ನಾಯಕನಿಗೆ ಕಾಂಗ್ರೆಸ್ ಮಣೆ.
ನವದೆಹಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ವಕೀಲರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
.ಕರ್ನಾಟಕ ಹೈಕೋರ್ಟ್ಗೆ ಆರು ನ್ಯಾಯಮೂರ್ತಿಗಳ ನೇಮಕ: ಕೊಲಿಜಿಯಂ ಶಿಫಾರಸು .
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಮ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೂ ಹಾಗೂ ಎಲ್ಲಾ ನೂತನ ಸಚಿವರುಗಳಿಗೂ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
.ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿ: ಡಿಕೆಶಿಗೆ ಸಿದ್ದರಾಮಯ್ಯ ಶುಭಾಶಯ.
ಬೆಂಗಳೂರು: 'ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ ಬದುಕಿನ ಭಾಗ್ಯ ಎಂದು ವಿನೀತನಾಗಿ ಸ್ವೀಕರಿಸಿದ್ದೇನೆ' ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
.ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ರೂಪಿಸಬೇಕೆಂಬ ಕನಸು ನನ್ನದು:ಡಿಕೆಶಿ.
ಮುಂಬೈ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳಿಂದ ವಿದೇಶಿ ಕರೆನ್ಸಿ ಮೀಸಲನ್ನು ಕಾಪಾಡಿಕೊಳ್ಳಲು ಆರ್ಬಿಐ ತನ್ನ ಸಂಗ್ರಹದಲ್ಲಿನ ಭೌತಿಕ ಚಿನ್ನವನ್ನು ಮಾರಾಟ ಮಾಡಿರಬಹುದು ಎಂಬುದಾಗಿ ಹೇಳುವ ವರದಿಗಳು ಆಧಾರವಿಲ್ಲದವು ಎಂದು ಆರ್ಬಿಐ ಸ್ಪಷ್ಟನೆ ನೀಡಿದೆ.
.ವಿದೇಶಿ ಕರೆನ್ಸಿ ಮೀಸಲನ್ನು ಕಾಪಾಡಿಕೊಳ್ಳಲು ಚಿನ್ನ ಮಾರಾಟ ಮಾಡಿಲ್ಲ: ಆರ್ಬಿಐ.
ಬೈರೂತ್: ದೂರವಾಣಿ ಕರೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು 'ಹುಚ್ಚ' ಎಂದು ಕರೆದಿದ್ದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ. ಬುಧವಾರ ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಿಂದಾಗಿ ಇರಾನ್ ಜೊತೆಗಿನ ಶಾಂತಿ ಮಾತುಕತೆಗೆ ಹಿನ್ನಡೆ ಉಂಟಾಗುತ್ತಿದೆ. ಇದರಿಂದ ಬೇಸರವಾಗಿದೆ ಎಂದೂ ಅವರು ಹೇಳಿದ್ದಾರೆ.
.ನಿನಗೇನಾದರೂ ಹುಚ್ಚು ಹಿಡಿದಿದೆಯೇ:ನೆತನ್ಯಾಹು ನಿಂದಿಸಿದ್ದನ್ನು ಒಪ್ಪಿಕೊಂಡ ಟ್ರಂಪ್.
ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್ವೊಂದರಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು, ವಿದೇಶಿಗರು ಸೇರಿದಂತೆ 21 ಜನರು ಮೃತಪಟ್ಟಿದ್ದಾರೆ.

ಅವಘಡದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ದೆಹಲಿಯ ರೆಸ್ಟೋರೆಂಟ್ನಲ್ಲಿ ಬೆಂಕಿ ದುರಂತ: ವಿದೇಶಿಗರು ಸೇರಿ 21 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.