ಇಂತಹ ಸಂದರ್ಭದಲ್ಲಿ ಸದನ ಮೌನವಾಗಿರಲು ಹೇಗೆ ಸಾಧ್ಯ? ಶಿವಕುಮಾರ್ ಹೇಳಿಕೆ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಹಾಗೂ ಅವರನ್ನು ವಜಾಗೊಳಿಸಬೇಕು. ಒಂದು ಕಡೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳುತ್ತೀರಿ. ಇನ್ನೊಂದು ಕಡೆಯಲ್ಲಿ ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನದ ಪ್ರತಿಯನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಂಡು ನಾಟಕವಾಡುತ್ತೀರಿ
ಕಿರಣ್ ರಿಜಿಜು, ಸಂಸದೀಯ ವ್ಯವಹಾರಗಳ ಸಚಿವ
ಕಾಂಗ್ರೆಸ್‌ನ ಗುಪ್ತ ಕಾರ್ಯಸೂಚಿ ಬಯಲಿಗೆ ಬಂದಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕು
ರವಿಶಂಕರ ಪ್ರಸಾದ್, ಬಿಜೆಪಿ ಸಂಸದ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ. ಈ ಸರ್ಕಾರಕ್ಕೆ ಆಡಳಿತ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ. ಇಡೀ ಸಂಪುಟವೇ ರಾಜೀನಾಮೆ ನೀಡಬೇಕು
ಬಸವರಾಜ ಬೊಮ್ಮಾಯಿ, ಸಂಸದ
ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ. ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರಬೇಕು
ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ
ಅಂಬೇಡ್ಕರ್ ಒದಗಿಸಿರುವ ಸಂವಿಧಾನವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಸಂವಿಧಾನವನ್ನು ರಕ್ಷಿಸುವವರು ನಾವು