ಹೊಳೆನರಸೀಪುರ: ‘ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡಲಿವೆ ಎಂಬ ಸುದ್ದಿಗಳು ಕೇವಲ ಊಹಾಪೋಹ. ನನ್ನ ರಾಜಕೀಯ ಅನುಭವದಲ್ಲಿ ಅಂಥ ಸಾಧ್ಯತೆ ಕಾಣುವುದಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ ರಾಜ್ಯಪಾಲರು ಕಾನೂನು ತಜ್ಞರ ಸಲಹೆ ಪಡೆದು ಸ್ಪಷ್ಟ ಬಹುಮತದ ಸಂಖ್ಯೆಯನ್ನು ಪರಿಗಣಿಸಲಿದ್ದಾರೆ ಎಂದರು.

‘ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ನಡೆ ಕುರಿತು ಟೀಕೆ ಮಾಡುವ ಅಗತ್ಯವಿಲ್ಲ. ಯಾವ ಸಂದರ್ಭಗಳಲ್ಲಿ ಅದು ಸರ್ಕಾರಗಳನ್ನು ಅಸ್ಥಿರಗೊಳಿಸಿದೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಕೇಂದ್ರದಲ್ಲಿ ಚರಣ್ಸಿಂಗ್, ವಿ.ಪಿ.ಸಿಂಗ್, ಚಂದ್ರಶೇಖರ್ ಸರ್ಕಾರಗಳ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳೇ ಸಾಕು. ದೇವೇಗೌಡರು ಪ್ರಧಾನಿಯಾಗಿದ್ದಾಗಲೂ ಯಾವ ಕಾರಣಗಳನ್ನು ನೀಡಿ ಸರ್ಕಾರ ಕೆಡವಿದರು ಎಂಬುದು ದೇಶಕ್ಕೆ ಗೊತ್ತಿದೆ’ ಎಂದು ಹೇಳಿದರು.

‘ಇಪ್ಪತ್ತು ವರ್ಷಗಳ ಕಾಲ ಡಿಎಂಕೆ ಜೊತೆ ಇದ್ದವರು, ಈಗ ವಿಜಯ್ ಜೊತೆ ಸೇರಿದ್ದಾರೆ. ಅವರ ರಾಜಕೀಯ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡೇ ತೀರ್ಮಾನ ಮಾಡಿರಬಹುದು. ಅದರ ಬಗ್ಗೆ ಕಾಲವೇ ಉತ್ತರ ನೀಡಲಿದೆ’ ಎಂದರು.

ವಿಜಯ್ ಸಾಧನೆ ಎಲ್ಲರಿಗೂ ಅಚ್ಚರಿ: ‘ಒಂದು ತಿಂಗಳ ಹಿಂದೆಯೇ ತಮಿಳುನಾಡಿನಲ್ಲಿ ಬದಲಾವಣೆಯ ವಾತಾವರಣ ಇದೆ ಎಂದು ನನ್ನ ಸ್ನೇಹಿತರಿಗೆ ಹೇಳಿದ್ದೆ. ಐವತ್ತು ವರ್ಷಗಳಿಂದ ಎರಡು ದ್ರಾವಿಡ ಪಕ್ಷಗಳ ಆಡಳಿತವನ್ನು ಜನ ನೋಡಿದ್ದಾರೆ. ಹೊಸ ವ್ಯವಸ್ಥೆ ಬೇಕೆಂಬ ನಿರೀಕ್ಷೆ ಜನರಲ್ಲಿ ಮೂಡಿತ್ತು’ ಎಂದರು.

ತಮಿಳುನಾಡಿನ ರಾಜಕಾರಣದಲ್ಲಿ ಸಿನಿಮಾದ ಪ್ರಭಾವ ಬಹಳ ಹಿಂದಿನಿಂದಲೂ ಇದೆ. ಈಗಲೂ ಅದೇ ಪ್ರಭಾವ ಕಾಣಿಸಿದೆ. ಹೊಸ ಮುಖಕ್ಕೆ ಅಧಿಕಾರ ನೀಡಬೇಕು ಎಂಬ ಮನೋಭಾವದಿಂದ ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.

ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು ಯಾರೂ ನಿರೀಕ್ಷಿಸಿರಲಿಲ್ಲ. ಅದು ಎಲ್ಲರಿಗೂ ಅಚ್ಚರಿ ತಂದಿದೆ ಎಂದರು.

ದೇವರೇ ಕಾಪಾಡಬೇಕು: ‘ತಮಿಳುನಾಡಿ ನಲ್ಲಿ ಘೋಷಿಸಲಾಗುತ್ತಿರುವ ಉಚಿತ ಗ್ಯಾರಂಟಿಗಳ ಕುರಿತು ಮಾತನಾಡಿದ ಅವರು, ತಮಿಳುನಾಡು ಸರ್ಕಾರದ ಬಜೆಟ್ ವರ್ಷಕ್ಕೆ ₹3.40 ಲಕ್ಷ ಕೋಟಿ ಇದೆ. ಆದರೆ ವಿಜಯ್ ಘೋಷಿಸಿರುವ ಉಚಿತ ಯೋಜನೆಗಳಿಗೆ ₹6 ಲಕ್ಷ ಕೋಟಿ ಬೇಕಾಗಬಹುದು. ಆ ಮಟ್ಟದ ಹಣವನ್ನು ಹೇಗೆ ಹೊಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ದೇವರೇ ಕಾಪಾಡಬೇಕು’ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಸ್ಪಷ್ಟ ಬಹುಮತ ಘೋಷಿಸಿದ ಬಳಿಕ ಅದು ಅಂತಿಮ. ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡುವುದಿಲ್ಲ ಎನ್ನುವುದು ಬಾಲಿಶ ಹೇಳಿಕೆ. ನಮ್ಮ ಸಂವಿಧಾನದಲ್ಲಿ ಅಂಥ ವ್ಯವಸ್ಥೆಯೇ ಇಲ್ಲ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-405883014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.