ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳರಿಗೆ ಅವಮಾನ ಆರೋಪ: ಶೋಭಾ ವಿರುದ್ಧ ಚು. ಆಯೋಗಕ್ಕೆ ದೂರು ನೀಡಿದ ಡಿಎಂಕೆ

Published 20 ಮಾರ್ಚ್ 2024, 8:29 IST
Last Updated 20 ಮಾರ್ಚ್ 2024, 8:29 IST
ಅಕ್ಷರ ಗಾತ್ರ

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಹೇಳಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತಮಿಳುನಾಡು ಜನತೆಯನ್ನು ಅವಮಾನಿಸಿದ್ದಕ್ಕಾಗಿ ಹಾಗೂ ಎರಡು ರಾಜ್ಯಗಳ ನಡುವೆ ಗಲಭೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಎಂಕೆಯ ಆರ್‌.ಎಸ್‌ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಈ ಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT