ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸದಾಕೆಗೆ ಕಿರುಕುಳ: ಡಿಎಂಕೆ ಶಾಸಕನ ಮಗ, ಸೊಸೆ ಬಂಧನ

Published 26 ಜನವರಿ 2024, 15:05 IST
Last Updated 26 ಜನವರಿ 2024, 15:05 IST
ಅಕ್ಷರ ಗಾತ್ರ

ಚೆನ್ನೈ: ಮನೆ ಕೆಲಸ ಮಾಡುವ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ಶಾಸಕರೊಬ್ಬರ ಮಗ ಮತ್ತು ಸೊಸೆಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

ಹಲ್ಲೆಗೊಳಗಾಗಿ ಉಲುಂದರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 18 ವರ್ಷದ ಸಂತ್ರಸ್ತೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ವಸತಿ ಸಮುಚ್ಚಯದಲ್ಲಿ ಕೆಲಸ ಮಾಡುವ ತನ್ನ ಮೇಲೆ ಗಂಡ ಮತ್ತು ಹೆಂಡತಿ ಕಿರುಕುಳ ನೀಡುತ್ತಾರೆ. ಜೊತೆಗೆ ಹಲ್ಲೆ ನಡೆಸಿದ್ದಾರೆ ಎಂದು ಆಕೆ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳಾದ ಆ್ಯಂಟೊ ಮಾಥಿವನಂ (35) ಹಾಗೂ ಅವರ ಪತ್ನಿ ಮಾರ್ಲಿಂಗ (32) ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಪರಿಶಿಷ್ಟ ಜಾತಿಯವರಾದ ಮನೆ ಕೆಲಸದಾಕೆಯ ಮೇಲೆ ಹಲ್ಲೆ ಮತ್ತು ನಿಂದನೆ ಮಾಡಿರುವ ಆರೋಪದ ಮೇರೆಗೆ ಡಿಎಂಕೆ ಶಾಸಕ ಕರುಣಾನಿಧಿ ಅವರ ಮಗ ಮತ್ತು ಸೊಸೆಯ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT