ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕ ಶಿವಾಜಿ ಕೃಷ್ಣಮೂರ್ತಿ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.

ಈ ಮೂಲಕ ಡಿಎಂಕೆ ಹಾಗೂ ಆರ್.ಎನ್.ರವಿ ನಡುವಣ ತಿಕ್ಕಾಟ ಮತ್ತೊಂದು ಮಗ್ಗುಲಿಗೆ ಹೊರಳಿದೆ.

ಶಿವಾಜಿ ಕೃಷ್ಣಮೂರ್ತಿ ಕಾನೂನು ಬಾಹಿರವಾಗಿ ನಡೆದುಕೊಂಡಿರುವುದರಿಂದ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಡಿಎಂಕೆ ಹೇಳಿದೆ.

ಶಿವಾಜಿ ಕೃಷ್ಣಮೂರ್ತಿ ಹೇಳಿಕೆ ವೈಯಕ್ತಿಕವಾದದ್ದು, ಅದಕ್ಕೂ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ. ನಮ್ಮ ಪಕ್ಷ ರಾಜ್ಯಪಾಲರನ್ನು ಗೌರವಿಸುತ್ತದೆ ಎಂದು ಡಿಎಂಕೆ ಹೇಳಿದೆ.

‘ನೀವು ಸರ್ಕಾರ ನೀಡಿದ ಭಾಷಣವನ್ನು ಓದದಿದ್ದರೆ, ಕಾಶ್ಮೀರಕ್ಕೆ ಹೋಗಿ, ಅಲ್ಲಿಗೆ ನಾವು ಭಯೋತ್ಪಾದಕರನ್ನು ಕಳುಹಿಸುತ್ತೇವೆ, ಅವರು ನಿಮ್ಮನ್ನು ಗುಂಡಿಕ್ಕಿ ಕೊಲ್ಲುತ್ತಾರೆ‘ ಎಂದು ಕೃಷ್ಣಮೂರ್ತಿ ಹೇಳಿದ್ದರು.

‘ರಾಜ್ಯಪಾಲರು ತಮ್ಮ ಭಾಷಣದಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಹೇಳಲು ನಿರಾಕರಿಸಿದರೆ, ಅವರ ಮೇಲೆ ಹಲ್ಲೆ ಮಾಡುವ ಹಕ್ಕು ನನಗೆ ಇಲ್ಲವೇ? ಎಂದು ಅವರು ಪ್ರಶ್ನೆ ಮಾಡಿದ್ದರು.

ಈ ಬಗ್ಗೆ ರಾಜ್ಯಪಾಲರ ಕಚೇರಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಜೊತೆ ವಿಡಿಯೊ ಹಾಗೂ ಆಡಿಯೊ ತುಣುಕುಗಳನ್ನು ಪೊಲೀಸರಿಗೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.