ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್ ವಿರೋಧಿಸಿ ಆ. 20ಕ್ಕೆ ಡಿಎಂಕೆ ಉಪವಾಸ ಸತ್ಯಾಗ್ರಹ

Published 16 ಆಗಸ್ಟ್ 2023, 16:18 IST
Last Updated 16 ಆಗಸ್ಟ್ 2023, 16:18 IST
ಅಕ್ಷರ ಗಾತ್ರ

ಚೆನ್ನೈ:  ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ ವಿರುದ್ಧದ ತನ್ನ ಅಭಿಪ್ರಾಯವನ್ನು ತೀಕ್ಷ್ಣಗೊಳಿಸುವ ನಿಟ್ಟಿನಲ್ಲಿ ತಮಿಳುನಾಡಿನ ಡಿಎಂಕೆ ನೇತೃತ್ವದ ಸರ್ಕಾರವು ಆಗಸ್ಟ್ 20ರಂದು ಒಂದು ದಿನದ ಮಟ್ಟಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ‘ನೀಟ್‌’ ಪರ ಕೇಂದ್ರ ಸರ್ಕಾರದ ಸಮರ್ಥನೆಯನ್ನು ಪ್ರತಿಪಾದಿಸಿರುವ ರಾಜ್ಯಪಾಲ ಆರ್.ಎನ್. ರವಿ ಅವರ ಬೇಜವಾಬ್ದಾರಿಯುತ ಹೇಳಿಕೆ ಖಂಡಿಸಿ ಪ್ರತಿಭಟನೆಯನ್ನೂ ನಡೆಸಲಿದೆ.

ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಡಿಎಂಕೆಯು ಪಕ್ಷದ ಯುವಜನ, ವಿದ್ಯಾರ್ಥಿ, ವೈದ್ಯಕೀಯ ಘಟಕಗಳು ಸೇರಿದಂತೆ ಪಕ್ಷದ ಎಲ್ಲ ಕೇಡರ್‌ಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಶನಿವಾರ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ತಿಳಿಸಿದೆ.

‘ತಮಿಳುನಾಡಿನಲ್ಲಿ ಹಲವು ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿರುವ ‘ನೀಟ್’ ಪರೀಕ್ಷೆಯನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರವು ನಿರಾಕರಿಸಿರುವುದನ್ನು ವಿರೋಧಿಸಿ’ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ ಎಂದೂ ಡಿಎಂಕೆ ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT