ಈರೋಡ್: ಏಪ್ರಿಲ್–ಮೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಗೆದ್ದು, ಅಧಿಕಾರಕ್ಕೇರಿದರೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಮಾಡಿರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಈರೋಡ್ನ ವಿ. ಮೆಟ್ಟುಪಾಳಯಂ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಅಧಿಕಾರದಲ್ಲಿರುವ ಎಐಎಡಿಎಂಕೆ ಸರ್ಕಾರವು ಭ್ರಷ್ಟವಾಗಿದೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ ಮತ್ತು ಶಿಕ್ಷಣ ಗುಣಮಟ್ಟ ಕುಸಿಯುತ್ತಿದೆ ಎಂದು ಆರೋಪಿಸಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ 100 ದಿನಗಳ ಕೆಲಸ ನೀಡುವ ಯೋಜನೆ ದುರುಪಯೋಗವಾಗಿದೆ. ಡಿಎಂಕೆ ಅಧಿಕಾರಕ್ಕೇರಿದರೆ ಅದನ್ನು ಸರಿಪಡಿಸಲಾಗುವುದು ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.