ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪುವುದಿಲ್ಲ: ಸಮಿತಿಗೆ ಮಮತಾ ಪತ್ರ

Published 11 ಜನವರಿ 2024, 11:09 IST
Last Updated 11 ಜನವರಿ 2024, 11:09 IST
ಅಕ್ಷರ ಗಾತ್ರ

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ಅಸಮ್ಮತಿ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್‌ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದಿದ್ದಾರೆ.

ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಯು ಭಾರತದ ಸಾಂವಿಧಾನಿಕ ವ್ಯವಸ್ಥೆಯ ಮೂಲ ರಚನೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

‘ನೀವು ರೂಪಿಸಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ. ನಿಮ್ಮ ಸೂತ್ರೀಕರಣ ಮತ್ತು ಪ್ರಸ್ತಾಪವನ್ನು ನಾವು ಅಸಮ್ಮತಿಸುತ್ತೇವೆ’ ಎಂದು ಸಮಿತಿಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಮಮತಾ ತಿಳಿಸಿದ್ದಾರೆ.

‘ಏಕಕಾಲದಲ್ಲಿ ಕೇಂದ್ರ ಮತ್ತು ರಾಜ್ಯ ಚುನಾವಣೆಗಳು ನಡೆಯದಿರುವುದು ಒಕ್ಕೂಟ ವ್ಯವಸ್ಥೆಯ ಮೂಲಭೂತ ಲಕ್ಷಣವಾಗಿದೆ. ಅದನ್ನು ಬದಲಾಯಿಸಬಾರದು. ಅಲ್ಲದೆ, ಏಕಕಾಲದಲ್ಲಿ ಚುನಾವಣೆ ನಡೆಯದಿರುವುದು ಭಾರತೀಯ ಸಾಂವಿಧಾನಿಕ ವ್ಯವಸ್ಥೆಗಳ ಮೂಲ ರಚನೆಯ ಭಾಗವಾಗಿದೆ’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಉನ್ನತ ಮಟ್ಟದ ಸಮಿತಿಯು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನ ಕುರಿತಂತೆ ಅಭಿಪ್ರಾಯ ಕೇಳಲು ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT