ಮುಂಬೈ: ಕೊರೊನಾ ವೈರಸ್ ಹರಡುವಿಕೆ ನಿಯಂತ್ರಣಕ್ಕಾಗಿ ದೇಶವ್ಯಾಪಿ ಲಾಕ್‍ಡೌನ್ ಆಗಿದ್ದರೂ ಮಹಾರಾಷ್ಟ್ರದಲ್ಲಿ ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ.ಈ ವೇಳೆ ಕೆಲವೆಡೆ ಪೊಲೀಸ್, ವೈದ್ಯಕೀಯ ಸಿಬ್ಬಂದಿ ಮೇಲೆ ಜನರು ಹಲ್ಲೆ ನಡೆಸಿದ ಪ್ರಕರಣಗಳು ವರದಿಯಾಗಿವೆ.

ಪರಿಸ್ಥಿತಿಯ ಗಾಂಭೀರ್ಯವನ್ನುಅರ್ಥ ಮಾಡಿಕೊಳ್ಳದಿರುವ ಜನರ ವಿರುದ್ಧ ಗುಡುಗಿದ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಜನರು ಸರ್ಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅಜಿತ್ ಪವಾರ್, ಕಾನೂನು ಉಲ್ಲಂಘಿಸುವ ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.ಪೊಲೀಸ್ ಮತ್ತು ಜನರು ಶಿಸ್ತು ಅಳವಡಿಸಿಕೊಳ್ಳಬೇಕು. ಅಮೆರಿಕದಲ್ಲಿ ಲಾಕ್‍ಡೌನ್ ಜಾರಿಗೆ ತರಲು ಸೇನೆಯನ್ನೇ ಕರೆತರಬೇಕಾಯಿತು.ಆ ಹಂತಕ್ಕೆ ತಲುಪಬಾರದು ಎಂಬುದು ನಮ್ಮ ಜವಾಬ್ದಾರಿ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.