ನವದೆಹಲಿ: ಚೀನಾದಲ್ಲಿ ತಯಾರಿಸಿದ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡಬೇಡಿ ಎಂದು ಅಮೆರಿಕದ ಟೆಸ್ಲಾ ಕಂಪನಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

‘ಇಂಡಿಯಾ ಟುಡೆ ಕಾನ್‌ಕ್ಲೇವ್ 2021’ನಲ್ಲಿ ಮಾತನಾಡಿದ ಅವರು, ಚೀನಾದಲ್ಲಿ ತಯಾರಿಸಿದ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡಬೇಡಿ. ಭಾರತದಲ್ಲೇ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸಿ ಮತ್ತು ರಫ್ತು ಮಾಡಿ. ಅದಕ್ಕೆ ಏನೆಲ್ಲ ನೆರವು ಬೇಕೋ ಅದೆಲ್ಲವನ್ನೂ ಸರ್ಕಾರ ಒದಗಿಸಿಕೊಡಲಿದೆ ಎಂದು ಟೆಸ್ಲಾಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

2030ರ ವೇಳೆಗೆ ಎಲೆಕ್ಟ್ರಿಕ್ ಕಾರು ಮಾರಾಟ ಶೇ 30ಕ್ಕೆ, ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಮಾರಾಟ ಶೇ 70ಕ್ಕೆ ಮತ್ತು ದ್ವಿಚಕ್ರ, ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಶೇ 80ಕ್ಕೆ ಹೆಚ್ಚಿಸಬೇಕೆಂಬ ಗುರಿ ಸರ್ಕಾರದ ಮುಂದಿದೆ ಎಂದೂ ಗಡ್ಕರಿ ಹೇಳಿದ್ದಾರೆ.

ಓದಿ:ಭಾರತದಲ್ಲಿ ಎಲೆಕ್ಟ್ರಿಕ್ ಕಾರು ತಯಾರಿಸಲು ಟೆಸ್ಲಾಗೆ ಮನವಿ: ನಿತಿನ್ ಗಡ್ಕರಿ

2030ರ ವೇಳೆಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಕಾರುಗಳ ಬಳಕೆ ಶೇ 40ಕ್ಕೆ ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಬಳಕೆ ಶೇ 10ಕ್ಕೆ ಹೆಚ್ಚಳವಾದರೆ ₹3.5 ಲಕ್ಷ ಕೋಟಿ ಮೌಲ್ಯದ 15.6 ಕೋಟಿ ಟನ್ ಕಚ್ಚಾ ತೈಲ ಬಳಕೆ ಕಡಿಮೆ ಮಾಡುವುದು ಸಾಧ್ಯವಾಗಲಿದೆ ಎಂದು ಗಡ್ಕರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.