ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದ್ವೇಷವನ್ನು ಪ್ರಜಾಪ್ರಭುತ್ವದ ಮೂಲಮಂತ್ರವಾಗಿಸಲು ಬಿಜೆಪಿ ಬಯಸುತ್ತಿದೆ: ಪ್ರಿಯಾಂಕಾ

Published : 18 ಸೆಪ್ಟೆಂಬರ್ 2024, 13:26 IST
Last Updated : 18 ಸೆಪ್ಟೆಂಬರ್ 2024, 13:26 IST
ಫಾಲೋ ಮಾಡಿ
Comments

ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿಯು ದ್ವೇಷವನ್ನು ಪ್ರಜಾಪ್ರಭುತ್ವದ ಮಂತ್ರವನ್ನಾಗಿಸಲು ಬಯಸುತ್ತಿದೆಯೇ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಬುಧವಾರ ಕಿಡಿಕಾರಿದ್ದಾರೆ.

‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಹಿಂಸೆಯನ್ನು ಪ್ರಚೋದಿಸುವ ಹೇಳಿಕೆ ನೀಡುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಾಯಕರು ಪ್ರೋತ್ಸಾಹಿಸುತ್ತಿದ್ದು, ಇದು ಉದ್ದೇಶ ಪೂರ್ವಕವಾಗಿದೆ‘ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶದ ಕೋಟ್ಯಂತರ ದಲಿತರು, ಬಡವರು, ಹಿಂದುಳಿದ ವರ್ಗ ಹಾಗೂ ಬುಡಕಟ್ಟು ಜನಾಂಗದ ಪರವಾಗಿ ರಾಹುಲ್‌ ಧ್ವನಿ ಎತ್ತಿರುವುದು ಅಪರಾಧವೇ?, ರಾಹುಲ್‌ ಭವಿಷ್ಯ ಅವರ ಅಜ್ಜಿಯಂತೆ ಆಗುತ್ತದೆ ಎಂದು ಬಿಜೆಪಿ ಬೆದರಿಕೆ ಹಾಕುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ವಿರುದ್ಧ ಮೌಖಿಕ ಮತ್ತು ಸೈದ್ಧಾಂತಿಕವಾಗಿ ಹಿಂಸಾತ್ಮಕ, ಅಮಾನವೀಯ ಹಾಗೂ ಅಸಭ್ಯ ಹೇಳಿಕೆಗಳನ್ನು ನೀಡುತ್ತಿರುವ ನಾಯಕರ ವಿರುದ್ಧ ಏಕೆ ಬಿಜೆಪಿ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT