ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರಿಗೆ ಗರಿಷ್ಠ ಶಿಕ್ಷೆ: ಇಂದು ಮಸೂದೆ ಮಂಡನೆ

Published 2 ಸೆಪ್ಟೆಂಬರ್ 2024, 21:43 IST
Last Updated 2 ಸೆಪ್ಟೆಂಬರ್ 2024, 21:43 IST
ಅಕ್ಷರ ಗಾತ್ರ

ಪಿಟಿಐ

ಕೋಲ್ಕತ್ತ: ಅತ್ಯಾಚಾರ ಮತ್ತು ಕೊಲೆ ಎಸಗಿದ ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆಯನ್ನು ಪ್ರಸ್ತಾಪಿಸಿರುವ ಅತ್ಯಾಚಾರ ತಡೆ ಮಸೂದೆಯನ್ನು ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಿದೆ.

ಆರೋಪಿಯು ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ್ದು ದೃಢಪಟ್ಟರೆ ಜಿವಿತಾವಧಿ ಜೈಲು ಶಿಕ್ಷೆ ವಿಧಿಸುವುದನ್ನು ಕರಡು ಮಸೂದೆ ಒಳಗೊಂಡಿದೆ.

‘ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ’ (ಪಶ್ಚಿಮ ಬಂಗಾಳ ಕ್ರಿಮಿನಲ್‌ ಕಾನೂನು ಮತ್ತು ತಿದ್ದುಪಡಿ ಮಸೂದೆ)–2024 ಅನ್ನು ಸರ್ಕಾರ ಮಂಡಿಸಲಿದೆ. ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಹೊಸ ನಿಬಂಧನೆಗಳನ್ನು ಇದರಲ್ಲಿ ಪರಿಚಯಿಸಲಾಗುತ್ತದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಒತ್ತು ನೀಡುವ ಗುರಿಯನ್ನು ಇದು ಹೊಂದಿದೆ.

ಹೊಸದಾಗಿ ಅಂಗೀಕರಿಸಲಾಗಿರುವ ಭಾರತೀಯ ನ್ಯಾಯ ಸಂಹಿತಾ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ–2023 ಮತ್ತು ಪೋಕ್ಸೊ–2012ರ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ಈ ಕರಡು ಮಸೂದೆ ಪ್ರಸ್ತಾಪಿಸುತ್ತದೆ.

ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಬಳಿಕ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ವೈದ್ಯರು ನಿರಂತರ ಮುಷ್ಕರ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಅತ್ಯಾಚಾರ, ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮಸೂದೆ ಮಂಡಿಸುವುದಾಗಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಘೋಷಿಸಿತ್ತು. ಈ ಸಂಬಂಧ ಎರಡು ದಿನಗಳ ವಿಶೇಷ ಅಧಿವೇಶನವನ್ನೂ ಕರೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT