ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಮತಾ ಬ್ಯಾನರ್ಜಿ ಮೊಣಕಾಲಿಗೆ ಗಾಯ: 10 ದಿನಗಳ ವಿಶ್ರಾಂತಿಗೆ ವೈದ್ಯರ ಸಲಹೆ

Published 25 ಸೆಪ್ಟೆಂಬರ್ 2023, 4:19 IST
Last Updated 25 ಸೆಪ್ಟೆಂಬರ್ 2023, 4:19 IST
ಅಕ್ಷರ ಗಾತ್ರ

ಕೋಲ್ಕತ್ತ: ಇತ್ತೀಚೆಗೆ ಸ್ಪೇನ್‌ ಮತ್ತು ದುಬೈ ಪ್ರವಾಸದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೊಣಕಾಲಿಗೆ ಗಾಯವಾಗಿದ್ದು, 10 ದಿನಗಳವರೆಗೆ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

ಬ್ಯಾನರ್ಜಿ ಅವರು ಆರೋಗ್ಯ ತಪಾಸಣೆಗೆಂದು ರಾಜ್ಯದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ತೆರಳಿದ್ದ ವೇಳೆ, ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ ನಂತರ ಈ ಸಲಹೆ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕಳೆದ ವಾರ ವಿದೇಶ ಪ್ರವಾಸದ ವೇಳೆ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು ನೋವಿನಿಂದ ಬಳಲುತ್ತಿದ್ದರು. ಈ ವರ್ಷದ ಆರಂಭದಲ್ಲಿ ಹೆಲಿಕಾಪ್ಟರ್‌ನಿಂದ ಇಳಿಯುವಾಗ ಅದೇ ಮೊಣಕಾಲಿಗೆ ಗಾಯವಾಗಿತ್ತು. ಕೆಲವು ಪರೀಕ್ಷೆಗಳನ್ನು ನಡೆಸಿದ ನಂತರ 10 ದಿನಗಳವರೆಗೆ ಎಲ್ಲಿಯೂ ಹೋಗದೆ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ನಾವು ಅವರಿಗೆ ಸಲಹೆ ನೀಡಿದ್ದೇವೆ’ ಎಂದು ವೈದ್ಯರು ತಿಳಿಸಿದ್ದಾರೆ.

ಜೂನ್‌ನಲ್ಲಿ ಎಡ ಮೊಣಕಾಲಿನ ಅಸ್ಥಿರಜ್ಜು ಗಾಯಕ್ಕೆ ಒಳಗಾಗಿದ್ದ ತೃಣಮೂಲ ಕಾಂಗ್ರೆಸ್‌ ನಾಯಕಿ ಬ್ಯಾನರ್ಜಿ ಅವರು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT