ನವದೆಹಲಿ: ಆಯುರ್ವೇದ ಸ್ನಾತಕೋತ್ತರ ವೈದ್ಯರಿಗೆ ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿರುವ ಪ್ರತಿಭಟನೆಗೆ ಏಮ್ಸ್ ವೈದ್ಯರು ಬೆಂಬಲ ಸೂಚಿಸಿದ್ದಾರೆ.

ಕಪ್ಪು ಪಟ್ಟಿ ಧರಿಸುವ ಮೂಲಕ ಏಮ್ಸ್ ಸೇರಿದಂತೆ ದೆಹಲಿಯ ಹಲವು ಆಸ್ಪತ್ರೆಯ ವೈದ್ಯರು ಬೆಂಬಲ ಸೂಚಿಸಿದ್ದಾರೆ.

ಜತೆಗೆ, ಸರ್ಕಾರಿ ಆಸ್ಪತ್ರೆಗಳಾದ ಎಲ್‌ಎನ್‌ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಡಿಡಿಯು, ಜಿಟಿಬಿ, ಬಿಎಸ್‌ಎ ಆಸ್ಪತ್ರೆ, ಸಂಜಯ್ ಗಾಂಧಿ ಮೆಮೊರಿಯಲ್ ಆಸ್ಪತ್ರೆ , ಹಿಂದೂ ರಾವ್ ಆಸ್ಪತ್ರೆಯ ವೈದ್ಯರು ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಸರ್ಕಾರದ ನಿರ್ಧಾರದಿಂದ ಸಾರ್ವಜನಿಕರ ಸುರಕ್ಷತೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಈ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ವೈದ್ಯರು ಕೋರಿದ್ದಾರೆ.

ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಿರೋಧಿಸಿ ಶುಕ್ರವಾರ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಅನಿವಾರ್ಯವಲ್ಲದ ಮತ್ತು ಕೋವಿಡ್ ರಹಿತ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು (ಐಎಂಎ) ಕರೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.