ಐದು ದಿನಗಳ ಕಾಲ ಧರಣಿ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ಪ್ರತಿಪಾದಿಸಿದ ರಾಜ್ಯ ಸರ್ಕಾರದ ಪರ ವಕೀಲರು, ಕೇವಲ ಒಂದು ದಿನ ಮಾತ್ರ ಧರಣಿಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
ಬುಧವಾರದಿಂದ ಆರು ದಿನಗಳ ಕಾಲ ಧರಣಿ ನಡೆಸಲು ಅನುಮತಿ ನೀಡುವಂತೆ ಬಿಜೆಪಿ ಪರ ವಕೀಲರು ಮನವಿ ಮಾಡಿದರು.
ಎರಡು ಕಡೆಗಳ ವಾದಗಳನ್ನು ಆಲಿಸಿದ ನಂತರ, ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರು ಐದು ದಿನಗಳ ಕಾಲ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ಅರ್ಧ ಕಿ.ಮೀ ದೂರದಲ್ಲಿರುವ ನಿಗದಿತ ಸ್ಥಳದಲ್ಲಿ ಬಿಜೆಪಿಗೆ ಧರಣಿ ನಡೆಸಲು ಅವಕಾಶ ನೀಡಿದರು.
ಬುಧವಾರದಿಂದ ಭಾನುವಾರದವರೆಗೆ ಪ್ರತಿದಿನ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ 300 ಜನರು ಮೀರದಂತೆ ಧರಣಿ ನಡೆಸಲು ನ್ಯಾಯಾಲಯವು ಅನುಮತಿ ನೀಡಿದೆ.
ಆಗಸ್ಟ್ 9ರಂದು ಆರ್.ಜಿ.ಕರ್ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಘಟನೆಯ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಸಂತ್ರಸ್ತರಿಗೆ ನ್ಯಾಯ ಹಾಗೂ ಆಸ್ಪತ್ರೆಗಳಲ್ಲಿ ಹೆಚ್ಚಿನ ಭದ್ರತೆಗಾಗಿ ಸೂಕ್ತ ಕಾನೂನು ಜಾರಿಗೊಳಿಸುವಂತೆ ಕೋರಿ ದೇಶದಾದ್ಯಂತ ವೈದ್ಯಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.