ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಭಾಗಿಯಾಗಿದ್ದಕ್ಕೆ ತನ್ನ ಬಳಿ ದಾಖಲೆಗಳಿವೆ ಎಂದು ಜಾರಿ ನಿರ್ದೇಶನಲಾಯ (ಇ.ಡಿ) ಹೇಳಿದೆ. ಈ ಮೂಲಕ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದೆ.
ಇ.ಡಿ ಬಂಧನದಲ್ಲಿರುವ ಸಿಸೋಡಿಯಾ, ತಮ್ಮ ಮೇಲೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಮತ್ತು ಇ.ಡಿ ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಆರೋಪ ಸೇರಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿಗಳಾದ ಬಿ. ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ.