ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿಯಲ್ಲಿ ಶನಿವಾರ ಇಎಸ್ಐ ಆಸ್ಪತ್ರೆ ಉದ್ಘಾಟನೆಗೆ ಬಂದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಪತ್ರಕರ್ತರು ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ಕುರಿತು ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮುಗಳ್ನಕ್ಕು ತೆರಳಿದರು.

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಏಕಾಏಕಿ ₹993 ಹೆಚ್ಚಳ ಮಾಡಿದೆಯಲ್ಲ ಎಂದು ಪತ್ರಕರ್ತರು ಪ್ರಶ್ನೆ ಕೇಳಿದರು. ಈ ಪ್ರಶ್ನೆಯನ್ನು ಕೇಳಿಸಿಕೊಳ್ಳದಂತೆ ಅವರು ಅಲ್ಲಿಂದ ತೆರಳಿದರು.

ಇದಕ್ಕೂ ಮುನ್ನ, ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ಸಾಹದಿಂದಲೇ ಉತ್ತರಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-4-1638544179

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.