ನ್ಯೂಯಾರ್ಕ್/ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ‘ಮಹಾನ್ ವ್ಯಕ್ತಿ’ ಹಾಗೂ ‘ಸ್ನೇಹಿತ’ ಎಂದು ಕರೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡಲು ನಿರ್ಧರಿಸಿದ್ದೇನೆ’ ಎಂದು ತಿಳಿಸಿದರು.

‘ಅವರು (ಮೋದಿ) ನನ್ನ ಸ್ನೇಹಿತ. ನಾವಿಬ್ಬರೂ ಮಾತನಾಡುತ್ತಿರುತ್ತೇವೆ. ನಾನು ಭಾರತಕ್ಕೆ ಭೇಟಿ ನೀಡಬೇಕು ಎಂದು ಅವರು ಬಯಸುತ್ತಿದ್ದಾರೆ. ಪ್ರಧಾನಿ ಮೋದಿಯನ್ನು ಭೇಟಿಯಾಗಲು ಅಲ್ಲಿಗೆ ಹೋಗುತ್ತಿದ್ದೇನೆ’ ಎಂದು ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡಲಿದ್ದೀರಾ’ ಎಂಬ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.

ಮುಂದಿನ ಕ್ವಾಡ್ ಶೃಂಗಸಭೆ ನವದೆಹಲಿಯಲ್ಲಿ ನಡೆಯಲಿದೆ. ಇದರಲ್ಲಿ ಆಸ್ಟ್ರೇಲಿಯಾ, ಜಪಾನ್, ಅಮೆರಿಕವನ್ನು ಭಾರತ ಆಹ್ವಾನಿಸಲಿದೆ. ಶೃಂಗಸಭೆಯ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.

ತೈಲ ಖರೀದಿ ಸ್ಥಗಿತ: ‘ನಿಜಕ್ಕೂ ಗ್ರೇಟ್. ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಖರೀದಿಸುತ್ತಿದ್ದ ಕಚ್ಚಾತೈಲವನ್ನು ಮೋದಿ ಬಹುತೇಕ ನಿಲ್ಲಿಸಿದ್ದಾರೆ’ ಎಂದು ಟ್ರಂಪ್ ಪುನರುಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.