ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು | ಆಕ್ರಮಣಕಾರಿ ವರ್ತನೆ ಬಿಡಿ: ಡಿಸಿಎಂ ಶಿವಕುಮಾರ್‌ಗೆ ತಮಿಳುನಾಡು ಕಿವಿಮಾತು

Published 31 ಮೇ 2023, 20:11 IST
Last Updated 31 ಮೇ 2023, 20:11 IST
ಅಕ್ಷರ ಗಾತ್ರ

ಚೆನ್ನೈ: ಮೇಕೆದಾಟು ಯೋಜನೆಗೆ ಸಂಬಂಧಿಸಿ ಆಕ್ರಮಣಕಾರಿಯಾಗಿ ವರ್ತಿಸಬೇಡಿ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಮಿಳುನಾಡು ಸರ್ಕಾರ ಬುಧವಾರ ಹೇಳಿದೆ.

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಡಿಎಂಕೆ ನೇತೃತ್ವದ ಸರ್ಕಾರ, ಮೇಕೆದಾಟು ಯೋಜನೆಯನ್ನು ವಿರೋಧಿಸುವುದಾಗಿ ಪುನರುಚ್ಚರಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ, ಡಿಎಂಕೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್‌, ‘ಅಧಿಕಾರಕ್ಕೆ ಬಂದು ಕೆಲ ದಿನಗಳು ಕಳೆದಿವೆ. ಅಷ್ಟರಲ್ಲೇ, ನೆರೆಯ ರಾಜ್ಯದ ಬಗ್ಗೆ ಶಿವಕುಮಾರ್‌ ಅವರು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದಕ್ಕೆ ಆಶ್ಚರ್ಯವಾಗಿದೆ. ಮೇಕೆದಾಟು ಯೋಜನೆ ಕುರಿತು ಅಧಿಕಾರಿಗಳು ಅವರಿಗೆ ವಿವರವಾದ ಮಾಹಿತಿ ನೀಡಿಲ್ಲ ಅನಿಸುತ್ತದೆ’ ಎಂದಿದ್ದಾರೆ.

‘ನಾನು ಶಿವಕುಮಾರ್ ಅವರನ್ನು ಭೇಟಿ ಮಾಡಿ, ಈ ವಿಷಯ ಕುರಿತು ವಿವರಿಸುತ್ತೇನೆ. ಅಲ್ಲಿಯವರೆಗೆ ಅವರು ತಾಳ್ಮೆಯಿಂದ ಇರುತ್ತಾರೆ ಎಂದು ಆಶಿಸುವೆ’.

‘ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದಕ್ಕಾಗಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಲು ಅವರನ್ನು ಭೇಟಿಯಾಗಲು ಯೋಜಿಸಿದ್ದೆ. ಆದರೆ, ಈಗ ಈ ಹೇಳಿಕೆ ಮೂಲಕವೇ ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ’ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT