ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠ ಸಮುದಾಯಕ್ಕೆ ಒಬಿಸಿ ಸೌಲಭ್ಯ: ರಾಣೆ ಅಸಮಾಧಾನ

Published 28 ಜನವರಿ 2024, 13:34 IST
Last Updated 28 ಜನವರಿ 2024, 13:34 IST
ಅಕ್ಷರ ಗಾತ್ರ

ಮುಂಬೈ: ಮರಾಠ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವವರೆಗೆ ಆ ಸಮುದಾಯದ ಜನರಿಗೆ ಇತರೆ ಹಿಂದುಳಿದ ವರ್ಗಗಳ ಸಮುದಾಯದ (ಒಬಿಸಿ) ಸೌಲಭ್ಯಗಳನ್ನು ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರಕ್ಕೆ ತಮ್ಮ ಸಮ್ಮತಿ ಇಲ್ಲ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಭಾನುವಾರ ಹೇಳಿದ್ದಾರೆ. 

‘ಇತರೆ ಹಿಂದುಳಿದ ಸಮುದಾಯಗಳ ಹಕ್ಕುಗಳ ಅತಿಕ್ರಮಣವ ಇದಾಗಿದ್ದು, ರಾಜ್ಯದಲ್ಲಿ ಅಶಾಂತಿಗೆ ಕಾರಣವಾಗಬಹುದು. ಹೀಗಾಗಿ ರಾಜ್ಯ ಸರ್ಕಾರದ ಈ ತೀರ್ಮಾನವನ್ನು ನಾನು ಒಪ್ಪುವುದಿಲ್ಲ’ ಎಂದು ಅವರು ‘ಎಕ್ಸ್’ ವೇದಿಕೆ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ. 

ಮತ್ತೊಂದೆಡೆ, ಸರ್ಕಾರದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಸಚಿವ ಛಗನ್ ಭುಜಬಲ್ ಅವರು, ಇತರೆ ಹಿಂದುಳಿದ ವರ್ಗಗಳ ಪ್ರವರ್ಗಕ್ಕೆ ಮರಾಠರು ಹಿಂಬಾಗಿಲಿನಿಂದ ಪ್ರವೇಶ ಪಡೆದಿದ್ದಾರೆ ಎಂದು ಟೀಕಿಸಿದ್ದಾರೆ.

ಮರಾಠ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವವರೆಗೆ ಒಬಿಸಿ ಸಮುದಾಯದ ಎಲ್ಲ ಸವಲತ್ತುಗಳನ್ನು ವಿಸ್ತರಿಸಲಾಗುತ್ತದೆ ಎಂಬ ಮಹಾರಾಷ್ಟ್ರ ಸರ್ಕಾರದ ಭರವಸೆ ಮೇರೆಗೆ ಸಾಮಾಜಿಕ ಕಾರ್ಯಕರ್ತ ಮನೋಜ್ ಜಾರಾಂಗೆ ಅವರು ತಾವು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶನಿವಾರ ಕೈಬಿಟ್ಟಿದ್ದರು. 

ಕುಣಬಿ ಜಾತಿಗೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ ಮರಾಠ ಸಮುದಾಯದ ಎಲ್ಲ ಸದಸ್ಯರನ್ನು ಕುಣಬಿ ರಕ್ತ ಸಂಬಂಧಿಗಳು ಎಂದು ಪರಿಗಣಿಸುವುದಾಗಿ ಸರ್ಕಾರ ಅಧಿಸೂಚನೆಯನ್ನೂ ಹೊರಡಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT