ಬೆಂಗಳೂರು: ದೇಶದಲ್ಲಿ ಲಾಕ್‌ಡೌನ್ ಅದರೂ, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ.
ತಮ್ಮ ಟ್ವೀಟ್, ಪೋಸ್ಟ್‌ಗಳ ಮೂಲಕ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸದಾ ತೀಕ್ಷ್ಣ ದಾಳಿ ನಡೆಸುವ ಸ್ವಾಮಿ, ಇಂದು ಟ್ವಿಟರ್‌ನಲ್ಲಿ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
‘ಓಮೈಕ್ರಾನ್‌ಗಾಗಿ ಲಾಕ್‌ಡೌನ್ ಆಗಬಹುದು ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿ ಚುನಾವಣೆಯನ್ನು ಸೆಪ್ಟೆಂಬರ್‌ಗೆ ಮುಂದೂಡಿದರೂ ಆಶ್ಚರ್ಯಪಡಬೇಕಿಲ್ಲ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲಾಗದ್ದನ್ನು, ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು,’ ಎಂದು ಅವರು ಬರೆದುಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟರ್ ಬಳೆದಾರರೊಬ್ಬರು ‘ ಮೋದಿಯವರು ಯೋಗಿ ಆದಿತ್ಯನಾಥರನ್ನು ವಜಾ ಮಾಡಲು ಬಯಸಿದ್ದರು. ಆದರೆ ಅದನ್ನು ನೇರವಾಗಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಷ್ಟ್ರಪತಿ ಆಡಳಿತವನ್ನು ಜಾರಿ ಮಾಡಿ ಯೋಗಿವರನ್ನು ಪಕ್ಕಕ್ಕೆ ಸರಿಸಲಿದ್ದಾರೆ. ಇದನ್ನೇ ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ಪೋಸ್ಟ್‌ನಲ್ಲಿ ಹೇಳಲು ಪ್ರಯತ್ನಿಸುತ್ತಿದ್ದಾರೆ,’ ಎಂದಿದ್ದಾರೆ.
Basically sir wanted to tell us that Modi wanted to sack Yogi ..But He cant do directly so he wil try presidents rule for removing Yogi 🦸🏼
— TRUPTESH (@TrTruptesh) December 23, 2021
ಕಳೆದ ಜೂನ್‌ನಲ್ಲಿ ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳೆದ್ದಿದ್ದವು. ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಸಿಎಂ ಸ್ಥಾನದಲ್ಲಿ ಕೂರಿಸಿ, ಮೋದಿ ಪರಮಾಪ್ತರೊಬ್ಬರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ತರಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.
ಇದನ್ನೂ ಓದಿ:ಉತ್ತರ ಪ್ರದೇಶ: ಯೋಗಿ ನಾಯಕತ್ವಕ್ಕೆ ಕುತ್ತು?
ಚುನಾವಣೆ ಮುಂದೂಡಿದೆರೆ ಏನಾಗಬಹುದು?
ಒಂದು ವೇಳೆ ಚುನಾವಣೆ ಮುಂದೂಡಲ್ಪಟ್ಟರೆ, 2024ರ ಲೋಕಸಭೆ ಚುನಾವಣೆಯಲ್ಲಿ ಏನಾಗಬಹುದು ಎಂದು ಮತ್ತೊಬ್ಬ ಟ್ವಿಟರ್ ಬಳಕೆದಾರರು ಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸ್ವಾಮಿ, ‘ಏನೂ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ತಾವೇ ರೂಪಿಸಿದ 75ರ ವಯಸ್ಸಿನ ಮಿತಿಯನ್ನು ತಲುಪಲಿದ್ದಾರೆ,’ ಎಂದು ವ್ಯಂಗ್ಯವಾಡಿದ್ದಾರೆ.
He will be entering his deadline 75th year age
— Subramanian Swamy (@Swamy39) December 23, 2021
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.