ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ವಿಷ್ಣುವಿನ 11ನೇ ಅವತಾರವಾಗಲು ಯತ್ನಿಸುತ್ತಿದ್ದಾರೆ: ಖರ್ಗೆ

Published 28 ಜನವರಿ 2024, 11:14 IST
Last Updated 28 ಜನವರಿ 2024, 11:14 IST
ಅಕ್ಷರ ಗಾತ್ರ

ಡೆಹ್ರಾಡೂನ್ (ಉತ್ತರಾಖಂಡ): ಪ್ರಧಾನಿ ನರೇಂದ್ರ ಮೋದಿ ಅವರು ವಿಷ್ಣುವಿನ 11ನೇ ಅವತಾರವಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಭಾನುವಾರ ಇಲ್ಲಿನ ಬನ್ನು ಶಾಲಾ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವಂತೆ ಜನತೆಗೆ ಕರೆ ನೀಡಿದರು. ಅಲ್ಲದೇ ಲೋಕಸಭೆ ಚುನಾವಣೆಯಲ್ಲಿ ಧರ್ಮದ ಹೆಸರಿನಲ್ಲಿ ಬಿಜೆಪಿ ಗೆಲ್ಲಲು ಬಿಡಬೇಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ನಾಯಕರು ದೇಶಕ್ಕಾಗಿ ಪ್ರಾಣ ತೆತ್ತಿದ್ದಾರೆ. ಆದರೆ ಬಿಜೆಪಿ ಎಂದಿಗೂ ಅಂತಹ ತ್ಯಾಗ ಮಾಡಿಲ್ಲ. ದೇಶವನ್ನು ಒಗ್ಗೂಡಿಸಲು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ನೆಹರು ಸ್ವಾತಂತ್ರ್ಯಕ್ಕಾಗಿ ಜೈಲುವಾಸ ಅನುಭವಿಸಿದ್ದರು. ಆದರೆ ಬಿಜೆಪಿ ಏನು ಮಾಡಿದೆ? ಎಂದು ಖರ್ಗೆ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT